ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮಾಡಿಕೊಂಡಿರುವ ಮೈತ್ರಿಯ ಕಾರಣ ಎರಡೂ ಪಕ್ಷಗಳ ಕಾರ್ಯಕರ್ತರು ಹೆಚ್ಚಿನ ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಎಲ್ಲಾ 28 ಸ್ಥಾನಗಳನ್ನು ಗೆಲ್ಲುವ ಪ್ರಯತ್ನದಲ್ಲಿ ನಿರತರಾಗಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕ್ಷೇತ್ರದೆಲ್ಲೆಡೆ ಬಿಜೆಪಿಗೆ ಅನುಕೂಲಕರವಾದ ವಾತಾವರಣವಿದೆ, ಕಾರಜೋಳ ಕನಿಷ್ಠ 2 ಲಕ್ಷ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದರು.
ರಾಜ್ಯ ಬಿಜೆಪಿ ಘಟಕದಲ್ಲಿ ಭುಗಿಲೆದ್ದಿರುವ ಭಿನ್ನಮತದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅಸಮಾಧಾನಗೊಂಡಿರುವ ಎಲ್ಲರೊಂದಿಗೆ ಮಾತಾಡಿದ್ದೇವೆ, ಒಂದು ಪಕ್ಷವೆಂದ ಮೇಲೆ ಭಿನ್ನಮತ ಇದ್ದೇಇರುತ್ತೆ, ಎಲ್ಲ ಸರಿಹೋಗುತ್ತದೆ ಎಂದು ಹೇಳಿದರು.
ಇನ್ನು ಬಿಜೆಪಿ ಆಡಳಿತದ ವೇಳೆ 40% ಕಮಿಷನ್ ಹೊಡೆದಿದೆ. ಹೀಗಾಗಿ ಮತ ಕೇಳಲು ಬರುವ ಬಿಜೆಪಿ ನಾಯಕರಿಗೆ ಗೋ ಬ್ಯಾಕ್ ಹೇಳಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿರುವ ವಿಚಾರಕ್ಕೆ ತಿರುಗೇಟು ನೀಡಿದ ಅವರು, ಚುನಾವಣೆ ಮುಗಿದು ಫಲಿತಾಂಶ ಬರಲಿ, ಯಾರು ಗೋ ಬ್ಯಾಕ್ ಯಾರು ಕಮ್ ಬ್ಯಾಕ್ ಅನ್ನೋದು ಗೊತ್ತಾಗಲಿದೆ ಎಂದು ತಿಳಿಸಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…