ಬೆಂಗಳೂರು, : ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳು ಬಯೋ ಮೆಟ್ರಿಕ್ ಹಾಜರಿ ವ್ಯವಸ್ಥೆಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಕಟ್ಟು ನಿಟ್ಟಿನ ಆದೇಶ ಹೊರಡಿಸಿದೆ.
ಮೇ 4 ರ ಒಳಗಾಗಿ ಎಲ್ಲ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳ ಭೋದಕ ಮತ್ತು ಭೋದಕೇತರ ಸಿಬ್ಬಂದಿಯ ಹಾಜರಿಯನ್ನು ಭಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಪಡೆದು ಇಲಾಖೆಗೆ ವರದಿ ಸಲ್ಲಿಸಬೇಕು ಎಂದು ಆದೇಶ ಹೊರಡಿಸಲಾಗಿದೆ.
ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಿಕೊಳ್ಳಲು ವಿಫಲವಾಗುವ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳು ಕಟ್ಟು ನಿಟ್ಟಿನ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಕಾಲೇಜುಗಳಲ್ಲಿ ಸಿಬ್ಬಂದಿ ಮತ್ತು ಬೋಧಕರ ಹಾಜರಾತಿ, ಕಾರ್ಯಕ್ಷಮತೆ, ಶಿಕ್ಷಣ ಗುಣಮಟ್ಟ ಹೆಚ್ಚಿಸುವನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. 2013ರಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿವ್ಯವಸ್ಥೆ ಜಾರಿಗೆ ತರಲಾಗಿದ್ದರೂ, ಕೆಲವು ಸರ್ಕಾರಿ ಕಚೇರಿಗಳಲ್ಲಿ ಮಾತ್ರ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಇದೆ. ಈಗ ಎಲ್ಲಾ ಪಿಯು ಕಾಲೇಜುಗಳಲ್ಲಿಯೂ ಇದನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದುಹೇಳಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…