ಬೆಂಗಳೂರು: ಹೊಸ ಕೈಗಾರಿಕಾ ನೀತಿ – 2020 – 25ರ ಅನ್ವಯ ರಿಯಾಯ್ತಿ ಹಾಗೂ ಉತ್ತೇಜನ ಪಡೆಯಲು ಕೈಗಾರಿಕಾ ಘಟಕಗಳು ಡಿ ವೃಂದದಲ್ಲಿ ಶೇ. 100 ರಷ್ಟು ಹಾಗೂ ಘಟಕದಲ್ಲಿ ಒಟ್ಟಾರೆ ಶೇ. 70 ರಷ್ಟು ಕನ್ನಡಿಗರಿಗೆ ಉದ್ಯೋಗ ನೀಡಬೇಕು ಎಂಬ ಷರತ್ತು ವಿಧಿಸಲಾಗಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ವಿಧಾನ ಪರಿಷತ್ ನಲ್ಲಿ ಜೆಡಿಎಸ್‍ನ ಸಿ. ಎನ್. ಮಂಜೇಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೈಗಾರಿಕಾ ಟೌನ್ ಶಿಪ್‍ಗಳ ಬಳಿಯೇ ಜನವಸತಿ ಪ್ರದೇಶಗಳನ್ನು ನಿರ್ಮಾಣ ಮಾಡುವ ಮೂಲಕ ವಾಕ್ ಟು ವರ್ಕ್‍ಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಡಾ. ಸರೋಜಿನಿ ಮಹಿಷಿ ವರದಿಯನ್ವಯ ರಾಜ್ಯದ ಕೈಗಾರಿಕೆಗಳಲ್ಲಿ ಶೇ. 85ರಷ್ಟು ಉದ್ಯೋಗವನ್ನು ಕನ್ನಡಿಗರಿಗೆ ನೀಡಬೇಕು. ಇದರಲ್ಲಿ ಯಾವುದೇ ಲೋಪವಾಗಿದ್ದರೆ ಅಂತಹ ಕೈಗಾರಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದರು.
ರಾಜ್ಯದ 5 ವಲಯಗಳಲ್ಲಿ ಕೈಗಾರಿಕಾ ಟೌನ್ ಶಿಪ್‍ಗಳನ್ನು ಸ್ಥಾಪನೆ ಮಾಡುವ ಮೂಲಕ ಕೈಗಾರಿಕೆಗಳನ್ನು ಎರಡನೇ ಹಂತದ ನಗರಗಳಿಗೂ ವಿಸ್ತರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…