Featured

ರಾಜ್ಯದ ಗ್ರಾಮಿಣ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರಿಂದ ಸಿಹಿಸುದ್ದಿ -Vishwanews24

ರಾಜ್ಯದ ಗ್ರಾಮಿಣ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರಿಂದ ಸಿಹಿಸುದ್ದಿ -Vishwanews24

ಬೆಂಗಳೂರು : ದೂರದ ಸ್ಥಳಗಳಿಂದ ಶಾಲಾ-ಕಾಲೇಜುಗಳಿಗೆ ತೆರಳುವ ಮಕ್ಕಳು ಸಮಯಕ್ಕೆ ಸರಿಯಾಗಿ ತಲುಪಲು ಅನುಕೂಲವಾಗುವಂತೆ ರಾಜ್ಯದ ಎಲ್ಲ ಭಾಗಗಳಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್‌ಗಳು ಸಂಚರಿಸಲಿವೆ. ಈ ಬಗ್ಗೆ ಸಂಬಂಧಪಟ್ಟ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

ಪ್ರೌಢ ಶಾಲೆ 9 ಮತ್ತು 10ನೇ ತರಗತಿಗಳು, ಪಿಯು ತರಗತಿಗಳು ಪುನಾರಂಭವಾಗಿದ್ದು, ಹಾಜರಾಗುವ ಮಕ್ಕಳ ಸಂಖ್ಯೆ ದಿನೇ ದಿನೇ ಏರುತ್ತಿದೆ. ಹೀಗಾಗಿ, ರಾಜ್ಯದ ಹಲವು ಭಾಗಗಳಲ್ಲಿ ಶಾಲೆ ಸಮಯಕ್ಕೆ ಬಸ್‌ಗಳು ಸಂಚರಿಸುವುದು ಅತ್ಯಗತ್ಯವಾಗಿದೆ. ಕೋವಿಡ್ ಲಾಕ್‌ಡೌನ್ ಪೂರ್ವದಲ್ಲಿ ಶಾಲಾ ಅವಧಿಗೆ ಸರಿಯಾಗಿ ಮಕ್ಕಳು ತಲುಪುವಂತೆ ಬಸ್ ಸಂಚರಿಸುತ್ತಿದ್ದವು. ಈಗ ಅದೇ ರೀತಿ ಬಸ್‌ಗಳು ಸಮಯಕ್ಕೆ ಸರಿಯಾಗಿ ಸಂಚರಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ.

ತರಗತಿಗಳ ಅವಧಿಗೆ ಸರಿಯಾಗಿ ಬಸ್ ಸಂಚಾರದಿಂದ ಮಕ್ಕಳ ಹಾಜರಾತಿ ಇನ್ನಷ್ಟು ಹೆಚ್ಚಳವಾಗುತ್ತದೆ. ಬಸ್‌ಗಳಲ್ಲಿ ಸಂಚರಿಸುವ ಮಕ್ಕಳು ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಮಕ್ಕಳು ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸಲಹೆ, ಸೂಚನೆಗಳನ್ನು ನಿರ್ವಾಹಕರು ನೀಡುತ್ತಿರಬೇಕು ಎಂದು ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

ಇನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 15ರ ಒಳಗಾಗಿ ರಾಜ್ಯದ ಎಲ್ಲಾ ಶಾಲೆಗಳಿಗೆ ಪಠ್ಯ ಪುಸ್ತಕಗಳನ್ನು ತಲುಪಿಸುವ ಗುರಿಯನ್ನು ಹೊಂದಿದೆ. ಈಗಾಗಲೇ ಶೇ 50ಕ್ಕಿಂತ ಹೆಚ್ಚು ಪಠ್ಯ ಪುಸ್ತಕಗಳನ್ನು ಸರಬರಾಜು ಮಾಡಲಾಗಿದೆ. ಶೇ 70ಕ್ಕೂ ಹೆಚ್ಚು ಪಠ್ಯ ಪುಸ್ತಕಗಳು ಮುದ್ರಣಗೊಂಡಿದ್ದು, ಸರಬರಾಜಿಗೆ ಸಿದ್ಧವಾಗಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಮೂಲಕ ಶಾಲಾ ಆರಂಭದ ನಂತ್ರ ಪಠ್ಯ ಪುಸ್ತಕಗಳ ನಿರೀಕ್ಷೆಯಲ್ಲಿದ್ದಂತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

13 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

21 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

21 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

21 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

21 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

21 hours ago