ಬೆಂಗಳೂರು: ವಿದ್ಯುತ್ ದರ ಏರಿಕೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಚಿಂತನೆ ನಡೆಸಿದೆ.
ಪ್ರತಿ ಯೂನಿಟ್‍ಗೆ 50-60 ಪೈಸೆ ಏರಿಕೆಗೆ ಎಸ್ಕಾಂಗಳು ಕೆಇಆರ್‌ಸಿ ಮುಂದೆ ಪ್ರಸ್ತಾವನೆ ಇಟ್ಟಿವೆ. ಇದರಿಂದ ಈ ವರ್ಷ ಏಪ್ರಿಲ್ ತಿಂಗಳಲ್ಲಿ ವಿದ್ಯುತ್ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
ಯೂನಿಟ್‍ಗೆ 49 ಪೈಸೆ ಏರಿಕೆ ಮಾಡುವಂತೆ ಡಿಸೆಂಬರ್ ಕೊನೆಯ ವಾರದಲ್ಲಿ ಬೆಸ್ಕಾಂ (BESCOM) ಪ್ರಸ್ತಾವನೆ ಸಲ್ಲಿಸಿತ್ತು. ಪ್ರಸ್ತಾವನೆಯಂತೆ ಉತ್ಪಾದನೆಯ ಖರ್ಚು-ವೆಚ್ಚ ಮತ್ತು ನಿರ್ವಹಣೆಯ ನಷ್ಟ ಸರಿದೂಗಿಸುವ ನಿಟ್ಟಿನಲ್ಲಿ ದರ ಏರಿಕೆಗೆ ಕೆಇಆರ್‌ಸಿ ಮುಂದಾಗಿದೆ.
ಸದ್ಯ ಪ್ರಸ್ತಾವನೆ ಪರಿಶೀಲಿಸಲಿರುವ ಆಯೋಗ, ಗ್ರಾಹಕ ಮತ್ತು ಬೆಸ್ಕಾಂ ಇಬ್ಬರಿಗೂ ಹೊರೆಯಾಗದಂತೆ ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಜಾರಿ ಮಾಡುವ ಸಾಧ್ಯತೆಯಿದೆ. ಬೆಸ್ಕಾಂ ಮಾತ್ರವಲ್ಲದೇ ಉಳಿದ ನಾಲ್ಕು ಎಸ್ಕಾಂಗಳಿಂದಲೂ ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ನಾಲ್ಕು ಎಸ್ಕಾಂಗಳಿಂದ 50-60 ಪೈಸೆ ದರ ಪರಿಷ್ಕರಣೆಗೆ ಪ್ರಸ್ತಾಪ ಸಲ್ಲಿಕೆಯಾಗಿದೆ.
ಎಲ್ಲಾ ಪರಿಷ್ಕೃತ ದರಗಳು ಏಪ್ರಿಲ್ 1 ರಿಂದಲೇ ಜಾರಿಯಾಗುವ ಸಾಧ್ಯತೆ ಇದ್ದು, ರಾಜ್ಯದ ಜನರಿಗೆ ವಿದ್ಯುತ್ ದರದ ಬಿಸಿ ತಟ್ಟಲಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…