ಬೆಂಗಳೂರು : ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದ್ದು, ಆ ಮೂಲಕ ಕಳೆದ ಹಲವು ದಿನಗಳಿಂದ ಯಾರಾಕ್ತಾರೆ ರಾಜ್ಯದ ಮುಂದಿನ ಸಿಎಂ ಎನ್ನುವ ಚರ್ಚೆಗೆ ತೆರೆ ಬಿದ್ದಂತಾಗಿದೆ.
ವಯಸ್ಸಿನ ಕಾರಣವನ್ನು ಮುಂದಿಟ್ಟುಕೊಂಡು ಬಿ.ಎಸ್. ಯಡಿಯೂರಪ್ಪ ಅವರಿಂದ ಪಕ್ಷ ರಾಜೀನಾಮೆ ಪಡೆದುಕೊಂಡಿತ್ತು. ಅದರಂತೆ ಜುಲೈ 26ರಂದು ಬಿಎಸ್ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ರಾಜ್ಯದ ಮುಂದಿನ ಸಿಎಂ ಯಾರಾಗ್ತಾರೆ ಎನ್ನುವ ಚರ್ಚೆಗಳು ನಡೆಯುತ್ತಿತ್ತು. ಜಾತಿವಾರು ಲೆಕ್ಕಾಚಾರಗಳ ಪ್ರಕಾರ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದವು. ಆದರೆ, ಇದೀಗ ಕಡೇ ಗಳಿಗೆಯಲ್ಲಿ ಬಸವರಾಜ್ ಬೊಮ್ಮಾಯಿಯವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಸವರಾಜ್ ಬೊಮ್ಮಾಯಿಯವರನ್ನು ಆಯ್ಕೆ ಮಾಡಲಾಗಿದೆ.
ಶಾಸಕಾಂಗ ಸಭೆಯಲ್ಲಿ ಯಡಿಯೂರಪ್ಪವರು ಬಸವರಾಜ್ ಬೊಮ್ಮಾಯಿಯವರ ಹೆಸರು ಪ್ರಸ್ತಾಪಿಸಿದರು. ಗೋವಿಂದ ಕಾರಜೋಳ ಅನುಮೋದಿಸುವ ಮೂಲಕ ಬೊಮ್ಮಾಯಿಯವರು ನೂತನ ಸಿಎಂ ಆಗಿ ಹೊರ ಹೊಮ್ಮಿದ್ದಾರೆ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…