ಬೆಂಗಳೂರು: ರಾಜ್ಯದ ಪಠ್ಯದಲ್ಲೂ ಭಗವದ್ಗೀತೆ ಸೇರ್ಪಡೆ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿ ನಿರ್ಧಾರಿಸುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಮೈಸೂರು ಮಹಾರಾಜರ ಮತ್ತು ಕರ್ನಾಟಕದ ಇತಿಹಾಸದ ಕುರಿತಂತೆ ಒಂದಷ್ಟು ಮಾಹಿತಿಗಳನ್ನು ಪಠ್ಯಕ್ರಮದಲ್ಲಿ ಸೇರಿಸಲಾಗಿದೆ. ಎಲ್ಲಾ ಪೋಷಕರು ನಮ್ಮ ಮಕ್ಕಳು ಜ್ಞಾನ ಸಂಪಾದನೆ ಮಾಡುತ್ತಿದ್ದಾರೆ. ಜ್ಞಾನಶೀಲರಾಗುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಹಿಂದೆ ಹಳ್ಳಿಗಳಲ್ಲಿ ರಾಮಾಯಣ, ಮಹಾಭಾರತ ನಾಟಕಗಳು ನಡೆಯುತ್ತಿದ್ದೇವು. ಹಾಗಾಗಿ ಎಲ್ಲರಲ್ಲಿಯೂ ಸಂಸ್ಕಾರ ಬೆಳೆಯುತ್ತಿತ್ತು. ಆದರೀಗ ಇದರ ಕೊರತೆ ಇದೆ ಎಂದಿದ್ದಾರೆ.
ಇದೇ ವೇಳೆ ಗುಜರಾತ್ ಮಾದರಿಯಲ್ಲಿ ರಾಜ್ಯದ ಪಠ್ಯದಲ್ಲೂ ಭಗವದ್ಗೀತೆ ಸೇರ್ಪಡೆ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ. ಗುಜರಾತ್ ಸರ್ಕಾರದ ನಿರ್ಧಾರ ಉತ್ತಮವಾಗಿ ಇದೆ. ಮಕ್ಕಳಿಗೆ ಮಾರಲ್ ಸೈನ್ಸ್ ವಿಷಯಗಳು ಇವತ್ತು ಬೋಧನೆ ಆಗುತ್ತಿಲ್ಲ. ಹೀಗಾಗಿ ಭಗವದ್ಗೀತೆ ಅಂಶಗಳನ್ನು ತಿಳಿಸುವುದು ಬಹಳ ಮುಖ್ಯ. ರಾಜ್ಯದ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ಬಗ್ಗೆ ಸಿಎಂ, ಶಿಕ್ಷಣ ತಜ್ಞರು, ಸಲಹಾ ಸಮಿತಿಗಳ ಜೊತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…