Featured

ರಾಜ್ಯದ ಪೊಲೀಸ್ ಕಾನ್ಸ್ ಟೇಬಲ್ ಗಳಿಗೆ ಗುಡ್ ನ್ಯೂಸ್: ಪತಿ-ಪತ್ನಿ ಅಂತರ ಜಿಲ್ಲಾ ವರ್ಗಾವಣೆಗೆ ಗ್ರೀನ್ ಸಿಗ್ನಲ್ – Vishwanews24

ರಾಜ್ಯದ ಪೊಲೀಸ್ ಕಾನ್ಸ್ ಟೇಬಲ್ ಗಳಿಗೆ ಗುಡ್ ನ್ಯೂಸ್: ಪತಿ-ಪತ್ನಿ ಅಂತರ ಜಿಲ್ಲಾ ವರ್ಗಾವಣೆಗೆ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ಗಳ ಪತಿ-ಪತಿ ಪ್ರಕರಣಗಳಲ್ಲಿ ಅಂತರ ಜಿಲ್ಲಾ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಅಂತರ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಪೊಲೀಸ್ ಪೇದೆಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.

ಈ ಕುರಿತಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಪೊಲೀಸ್ ಪೇದೆಗಳ ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ ಜಿಲ್ಲಾ ವರ್ಗಾವಣೆಗೆ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

ಲೋಕಸಭಾ ಚುನಾವಣೆಗೆ ನೀತಿ ಸಂಹಿತೆ ಜಾರಿಯಾಗುವ ಮುನ್ನ ಅರ್ಹ ಪೊಲೀಸ್ ಕಾನ್ಸ್ ಟೇಬಲ್ ಗಳನ್ನು ಅಂತರ ಜಿಲ್ಲಾ ವರ್ಗಾವಣೆಗೆ ಪ್ರಸ್ತಾವನೆಗಳ ಬಗ್ಗೆ ಕ್ರಮ ಕೈಗೊಂಡು, ಆ ಬಗ್ಗೆ ತಮಗೆ ವರದಿ ನೀಡುವಂತೆಯೂ ಗೃಹ ಸಚಿವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರದಲ್ಲಿ ನಿರ್ದೇಶಿಸಿಸಿದ್ದಾರೆ.

ಅಂದಹಾಗೇ ಕಳೆದ ಮೂರು ವರ್ಷಗಳಿಂದ ಪೊಲೀಸ್ ಪೇದೆಗಳ ವರ್ಗಾವಣೆ ನಡೆದಿಲ್ಲ. ಈ ಸಂಬಂಧ ಗೃಹ ಸಚಿವರಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ನಮಗೆ ದಯಾಮರಣ ನೀಡುವಂತೆ ಸೋಷಿಯಲ್ ಮೀಡಿಯಾದಲ್ಲಿ ಪೊಲೀಸ್ ಪೇದೆಯೊಬ್ಬರು ಬರೆದಂತ ಪತ್ರ ವೈರಲ್ ಆಗಿತ್ತು. ಈ ಬೆನ್ನಲ್ಲೇ ಗೃಹ ಸಚಿವ ಡಾ.ಜಿ ಪರಮೇಶ್ವರ್ ಈ ಸೂಚನೆ ನೀಡಿದ್ದಾರೆ.

 

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

3 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

3 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

4 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

4 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

4 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

4 hours ago