ಬೆಂಗಳೂರು: ಈಗಾಗಲೇ ರಾಜ್ಯದ ಪ್ರತಿ ಕುಟುಂಬಕ್ಕೆ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಕರ್ನಾಟಕ ಕಾಂಗ್ರೆಸ್ ಘೋಷಿಸಿತ್ತು. ಈ ಬೆನ್ನಲ್ಲೇ ಇಂದು ಕಾಂಗ್ರೆಸ್ ಗ್ಯಾರಂಟಿ-2 ಅನ್ನು ಘೋಷಣೆ ಮಾಡಿದೆ. ಅದರಂತೆ ಬೆಲೆಯೇರಿಕೆಯಿಂದ ದಿಕ್ಕೆಟ್ಟ ರಾಜ್ಯದ ಪ್ರತಿ ಕುಟುಂಬದ ಗೃಹಣಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು ನೀಡುವುದಾಗಿದೆ ಪ್ರಿಯಾಂಕ ಗಾಂಧಿಯವರಿಂದ ಐತಿಹಾಸಿಕ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಕೆಪಿಸಿಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ – 2 ಬಿಡುಗಡೆ ಮಾಡಿದೆ. ರಾಜ್ಯ ಹಾಗೂ ದೇಶದಲ್ಲಿ ಮಹಿಳೆಯರ ಸಬಲಿಕರಣಕ್ಕೆ ನಿರಂತರವಾಗಿ ಅಗತ್ಯ ಯೋಜನೆಗಳನ್ನು ನೀಡುತ್ತಾ ಬಂದಿರುವ ಕಾಂಗ್ರೆಸ್, ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಘೋಷಣೆ ಮಾಡಲು ತೀರ್ಮಾನಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಮ್ಮ ಸರ್ಕಾರದಿಂದ ರಾಜ್ಯದ ಮಹಿಳೆಯರು ಏನನ್ನು ಬಯಸುತ್ತಾರೆ? ಎಂಬುದನ್ನ ತಿಳಿಯಲು ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾರ್ ರಾಜ್ಯದ ಮಹಿಳೆಯರಿಗೆ ತಮ್ಮ ಭಾವನೆ, ಸಮಸ್ಯೆ, ಸಲಹೆ, ಅಭಿಪ್ರಾಯ ಹಂಚಿಕೊಳ್ಳುವಂತೆ ಕರೆ ನೀಡಿದ್ದರು ಎಂದಿದೆ.
ಈ ಕರೆಗೆ ಸ್ಪಂದಿಸಿ ಸಾಮಾಜಿಕ ಜಾಲತಾಣ, ಇ ಮೇಲ್, ವಾಟ್ಸಪ್ ಹಾಗೂ ಪಕ್ಷದ ಕಚೇರಿಗೆ ಪತ್ರದ ರೂಪದಲ್ಲಿ ಸಾವಿರಾರು ಸಲಹೆಗಳು ಸ್ವೀಕಾರವಾಗಿವೆ. ಇದರಲ್ಲಿ ಬಹುತೇಕ ಮಹಿಳೆಯರು ಬೆಲೆ ಏರಿಕೆ ಸಮಸ್ಯೆಗೆ ಕಾಂಗ್ರೆಸ್ ಪಕ್ಷದಿಂದ ಪರಿಹಾರ ನಿರೀಕ್ಷಿಸುತ್ತಿರುವುದಾಗಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಬೆಲೆ ಏರಿಕೆ ಪರಿಣಾಮವಾಗಿ ಮನೆಯಲ್ಲಿ ದುಡಿಯುವವರ ವೇತನ ಸಾಲದೇ ಸಂಕಷ್ಟ ಅನುಭವಿಸುತ್ತಿರುವುದಾಗಿ ಹೇಳಿದ್ದಾರೆ ಎಂದು ತಿಳಿಸಿದೆ.
ಮಹಿಳೆಯರು ನಮ್ಮ ಮನೆ ಹಾಗೂ ರಾಜ್ಯದ ಶಕ್ತಿ ಮೂಲವಾಗಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕುಟುಂಬ ಹಾಗೂ ಮನೆ ನಿರ್ವಹಣೆಯಲ್ಲಿ ಅವರು ಅನುಭವಿಸುತ್ತಿರುವ ಸಂಕಷ್ಟ ಅತೀವವಾಗಿದೆ ಎಂದಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ಮಹಿಳೆಯರ ಸಂಕಷ್ಟಕ್ಕೆ ಪ್ರಮಾಣದ ನೆರವು ನೀಡುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಗೃಹಲಕ್ಷ್ಮಿ ಯೋಜನೆಯನ್ನು ಘೋಷಣೆ ಮಾಡಿದ್ದು, ಈ ಯೋಜನೆ ಮೂಲಕ ರಾಜ್ಯದ ಪ್ರತಿ ಕುಟುಂಬದ ಓರ್ವ ಗೃಹಿಣಿಗೆ ಸರ್ಕಾರದ ವತಿಯಿಂದ ಪ್ರತಿ ತಿಂಗಳು ₹2,000ರಂತೆ ವರ್ಷಕ್ಕೆ ₹24 ಸಾವಿರ ಆರ್ಥಿಕ ನೆರವನ್ನು ಕಾಂಗ್ರೆಸ್ ಸರ್ಕಾರ ಒದಗಿಸಲಿದೆ. ಈ ಯೋಜನೆಯು ರಾಜ್ಯದ 1.5 ಕೋಟಿ ಗೃಹಣಿಯರಿಗೆ ನೆರವಾಗಲಿದೆ ಎಂದು ತಿಳಿಸಿದೆ.
Join our Whatsapp group by clicking the below link 👇👇
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…