ಉಡುಪಿ

ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಏಪ್ರಿಲ್ 26 ರಂದು ಸಾಮೂಹಿಕ ವಿವಾಹ : ಕೋಟಾ ಶ್ರೀನಿವಾಸ ಪೂಜಾರಿ -Vishwanews24

ಉಡುಪಿ: ಧಾರ್ಮಿಕ ಧತ್ತಿ ಇಲಾಖೆ ವ್ಯಾಪ್ತಿಗೊಳಪಡುವ ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಏಪ್ರಿಲ್ 26 ರಂದು ಸಾಮೂಹಿಕ ವಿವಾಹಗಳನ್ನು ನಡೆಸಲಾಗುವುದು ಎಂದು ರಾಜ್ಯದ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಉಡುಪಿ ಜಿಲ್ಲೆಯ ಎ ವರ್ಗದ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ನಡೆಸುವ ಕುರಿತಂತೆ ವಿವಿಧ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯನಿರ್ವಹಣಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಧಾರ್ಮಿಕ ಧತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ, ಉತ್ತಮ ಆದಾಯವಿರುವ ರಾಜ್ಯದ 110 ದೇವಾಲಯಗಳಲ್ಲಿ 2020 ರ ಏಪ್ರಿಲ್ 26 ರಂದು ಸಾಮೂಹಿಕ ವಿವಾಹ ನಡೆಸಲು ದಿನಾಂಕ ನಿಗಧಿಪಡಿಸಿದ್ದು, ವಿವಾಹವಾಗುವ ದಂಪತಿಗಳಿಗೆ ಎಪಿಎಲ್, ಬಿಪಿಎಲ್ ಎಂಬ ಮಾನದಂಡ ಇಲ್ಲ, ವಿವಾಹವಾಗುವ ವರನಿಗೆ ಪೋತ್ಸಾಹಧನವಾಗಿ (ಹೂವಿನ ಹಾರ, ಪಂಚೆ, ಶರ್ಟ್ ಮತ್ತು ಶಲ್ಯಕ್ಕಾಗಿ) ರೂ.5000.00 ಮತ್ತು ವಧುವಿಗೆ (ಹೂವಿನ ಹಾರ, ಧಾರೆ ಸೀರೆ, ರವಿಕೆ ಕಣಕ್ಕಾಗಿ) 10000.00 ಹಾಗೂ ವಧುವಿಗೆ ಚಿನ್ನದ ತಾಳಿ, ಚಿನ್ನದ ಗುಂಡು (ಅಂದಾಜು 8 ಗ್ರಾಂ ತೂಕ) ಗಾಗಿ 40000.00 ಗಳನ್ನು ನೀಡಲಾಗುವುದು, ಈ ಮೊತ್ತವನ್ನು ವಿವಾಹವಾದ ದಿನವೇ ಸಂಬಂದಪಟ್ಟ ವಧು ವರರ ಖಾತೆಗೆ ಆರ್.ಟಿ.ಜಿ.ಎಸ್ ಮೂಲಕ ಜಮೆ ಮಾಡಲಾಗುವುದು ಹಾಗೂ ವಿವಾಹಕ್ಕೆ ಆಗಮಿಸುವ ವಧು ವರರ ಬಂಧುಗಳಿಗೆ/ಸಾರ್ವಜನಿಕರಿಗೆ ಊಟೋಪಚಾರ ವ್ಯವಸ್ಥೆಯನ್ನು ಹಾಗೂ ಇತರೆ ವ್ಯವಸ್ಥೆಗೆ ತಗಲುವ ವೆಚ್ಚವನ್ನು ದೇವಾಲಯಗಳ ನಿಧಿಯಿಂದ ಭರಿಸಲಾಗುವುದು ಎಂದು ಹೇಳಿದರು.

ಸಾಮೂಹಿಕ ವಿವಾಹ ನಡೆಯುವ ಕುರಿತಂತೆ ಸಂಬಂದಪಟ್ಟ ಎಲ್ಲಾ ದೇವಾಲಯಗಳ ಆವರಣದಲ್ಲಿ ಮಾಹಿತಿಯನ್ನು ಪ್ರಚುರಪಡಿಸುವಂತೆ ತಿಳಿಸಿದ ಮುಜರಾಯಿ ಸಚಿವರು, 27-3-2020 ವಧು ವರರ ವಿವರಗಳನ್ನು ನೊಂದಾಯಿಸಿಕೊಳ್ಳಲು ಕಡೆಯ ದಿನಾಂಕವಾಗಿದ್ದು, 1-4-2020 ರಂದು ನೊಂದಾಯಿಸಿಕೊಂಡ ವಧು ವರರ ವಿವರಗಳನ್ನು ದೇವಾಲಯಗಳಲ್ಲಿ ಪ್ರಕಟಪಡಿಸಲಾಗುವುದು, 6-4-2020 ವಧು ವರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, 11-4-2020 ರಂದು ಅಂತಿಮ ವಧು ವರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಸಾಮೂಹಿಕ ವಿವಾಹದಲ್ಲಿ ಮೊದಲ ಬಾರಿಗೆ ವಿವಾಹವಾಗುವವರಿಗೆ ಮಾತ್ರ ಅವಕಾಶವಿದ್ದು, ಎರಡನೇ ಮದುವೆ ಆಗುವವರಿಗೆ ಅವಕಾಶವಿಲ್ಲ, ವಧು ವರರ ನಿಯಮಾನುಸಾರ ಪ್ರಾಪ್ತ ವಯಸ್ಕರಾಗಿದ್ದು, ಈ ಬಗ್ಗೆ ಸರ್ಕಾರದ ಅಧಿಕೃತ ದಾಖಲೆಗಳನ್ನು ನೀಡಬೇಕು. ವಿವಾಹ ನಡೆಯುವ ಸ್ಥಳದಲ್ಲೇ ವಿವಾಹ ನೊಂದಣಾಧಿಕಾರಿಗಳಿಂದ ವಿವಾಹ ನೊಂದಣಿ ನಡೆಯಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಬಾಂಡ್ ವಿತರಣೆ ಸಹ ನೀಡಲಾಗುವುದು , ರಾಜ್ಯದ ಪ್ರಮುಖ ಖಾಸಗಿ ಸಂಸ್ಥೆಗಳು ತಮ್ಮ ನಿಧಿಯಿಂದ ವಧು ವರರಿಗೆ ಉಚಿತ ಉಡುಗೊರೆ ನೀಡುವುದಾದರೆ ಅದಕ್ಕೆ ಅವಕಾಶ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಏಪ್ರಿಲ್ 26 ರಂದು ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ, ಪೇಜಾವರ ಶ್ರೀಗಳು, ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ, ರವಿಶಂಕರ್ ಗುರೂಜಿ, ಇನ್ಫೋಸಿಸ್ನ ಸುಧಾಮೂರ್ತಿ, ಪ್ರಮುಖ ವೀರಶೈವ ಮಠಾಧೀಶರು, ಒಕ್ಕಲಿಗ ಗುರುಗಳು ಸೇರಿದಂತೆ ಪ್ರಮುಖ ಧಾರ್ಮಿಕ ಗುರುಗಳು ಈ ವಿವಾಹ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

ಸಾಮಾಹಿಕ ವಿವಾಹ ಕಾರ್ಯಕ್ರಮದ ಬಗ್ಗೆ ಶೀಘ್ರದಲ್ಲಿಯೇ ಟೋಲ್ ಫ್ರೀ ಸಂಖ್ಯೆಯನ್ನು ನೀಡಲಿದ್ದು, ಬೆಳಗ್ಗೆ 10 ರಿಂದ 6 ಗಂಟೆಯವರೆಗೆ ಸಾರ್ವಜನಿಕರು ಕರೆ ಮಾಡಿ ವಿವಾಹಕ್ಕೆ ನಿಗಧಿಪಡಿಸಿರುವ ಅರ್ಹತೆಗಳು ಮತ್ತಿತರ ಅಗತ್ಯ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಸಚಿವರು ಹೇಳಿದರು.

ಸಭೆಯಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಜಿ.ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಹಾಗೂ ಎಲ್ಲಾ ತಾಲೂಕುಗಳ ತಹಸೀಲ್ದಾರರು ಮತ್ತು ವಿವಿಧ ದೇವಾಲಯಗಳ ಆಡಳಿತ ಮೊಕ್ತೇಸರರು, ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಧಾರ್ಮಿಕ ಧತ್ತಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago