ಬೆಂಗಳೂರು: ರಾಜ್ಯದ ಬಿಜೆಪಿ ಸರ್ಕಾರದ ಅವ್ಯವಹಾರಗಳನ್ನು ಬಯಲಿಗೆಳೆಯಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಇಡೀ ವರ್ಷ ಹೋರಾಟ ನಡೆಸಲಾಗುವುದು. ಸರ್ಕಾರದ ತೆರಿಗೆ ಹೆಚ್ಚಳ ನೀತಿಯ ವಿರುದ್ಧ ನಿರಂತರ ಧ್ವನಿ ಎತ್ತಲಾಗುವುದು ಎಂದು ಕೆಪಿಸಿಸ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.
ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೆಂಗಳೂರು ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಿಬಿಎಂಪಿ ವಿರುದ್ಧ ಇಂದು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, 2021ನ್ನು ಹೋರಾಟ ಮತ್ತು ಸಂಘಟನಾತ್ಮಕ ವರ್ಷ ಎಂದು ಘೋಷಣೆ ಮಾಡಿದ್ದೇವೆ. ಹೀಗಾಗಿ ಪ್ರತಿ ಕ್ಷೇತ್ರಕ್ಕೂ ಭೇಟಿ ನೀಡಿ, ಅಲ್ಲಿ ಸ್ಥಳೀಯವಾಗಿ ಜನರ ಸಮಸ್ಯೆಗಳನ್ನು ಆಲಿಸಿ, ಅದನ್ನು ಬಗೆಹರಿಸಲು ಪ್ರತಿಭಟನೆ ಮಾಡುತ್ತೇವೆ. ಜನರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ. ಸರ್ಕಾರಕ್ಕೆ ಅರಿವು ಮೂಡಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.
ಬಿಜೆಪಿ ಸರ್ಕಾರದಲ್ಲಿ ಎಲ್ಲದಕ್ಕೂ ಲಂಚ ಕೊಡಬೇಕಿದೆ. ಕಚೇರಿಯ ಬಾಗಿಲು ಮುಟ್ಟಲೂ ಒಂದು ರೇಟ್ ಫಿಕ್ಸ್ ಆಗಿದೆ. ಕೊರೊನಾ ಸಂದರ್ಭದಲ್ಲಂತೂ ಲೂಟಿ ಹೊಡೆಯಲಾಗಿದೆ. ಕೊರೊನಾ ಸಂದರ್ಭದಲ್ಲಿ ವ್ಯಾಪಾರ ವಹಿವಾಟುಗಳು ಮುಚ್ಚಿ ಹೋಗಿವೆ. ಉದ್ಯೋಗ ವಿಲ್ಲದೆ ಜನ ತತ್ತರಿಸಿ ಹೋಗಿದ್ದಾರೆ. ಲಾಕ್ ಡೌನ್, ಸೀಲ್ ಡೌನ್ ಹೆಸರಿನಲ್ಲಿ ಮತ್ತಷ್ಟು ತೊಂದರೆ ಮಾಡಲಾಗಿದೆ. ಬ್ಯಾಂಕ್ ಮೂಲಕ ಸಹಾಯ ಮಾಡುವುದಾಗಿ ಹೇಳಲಾಗಿತ್ತು. ಆದರೆ, ಈವರೆಗೂ ಯಾರಿಗೂ ನೆರವು ಸಿಕ್ಕಿಲ್ಲ ಎಂದು ಅವರು ಆರೋಪಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…