Featured

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – vishwanews24

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ ಬೆನ್ನಲ್ಲೇ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಮಾರ್ಗಸೂಚಿಗಳನ್ನು ಸರ್ಕಾರ ಬಿಡುಗಡೆ ಮಾಡಿದೆ.

ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಅವರು ಹುಂಡಿ ನಗದು, ಚಿನ್ನ, ಬೆಳ್ಳಿ, ಭದ್ರತೆಗೆ ಸಂಬಂಧಿಸಿದಂತೆ ರಾಜ್ಯದ ಧಾರ್ಮಿಕ ದತ್ತಿ, ಜಿಲ್ಲಾಧಿಕಾರಿಗಳು, ಜಿಲ್ಲಾ ಎಸ್ಪಿ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿ, ಆದೇಶ ಹೊರಡಿಸಿದ್ದಾರೆ.

ದೇವಾಲಯಗಳ ವಿವಿಧ ಸೂಕ್ತ ಜಾಗಗಳನ್ನು ಗುರುತಿಸಿ, ಎಲ್ಲರಿಗೂ ಕಾಣುವಂತೆ ಹುಂಡಿಗಳನ್ನು ಅಳವಡಿಸಿ, ಸೂಕ್ತ ಭದ್ರತೆ ಒದಗಿಸುವುದು. ದೇವಾಲಯದಲ್ಲಿ ಅಳವಡಿಸುವ ಹುಂಡಿಗಳಿಗೆ ನಾಲ್ಕು ದಿಕ್ಕಿನಿಂದ ಕಾಣುವಂತೆ ಅಗತ್ತವಾದ ಸಿಸಿಟಿವಿ ಕ್ಯಾಮರಾಗಳನ್ನು ಕಡ್ಡಾಯವಾಗಿ ಅಳವಡಿಸಿ, ಸರ್ವರ್‌ನಲ್ಲಿ ಸಂರಕ್ಷಿಸುವುದು.

ಜಿಲ್ಲಾಧಿಕಾರಿಗಳ/ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿನ ಮುಜರಾಯಿ ವಿಭಾಗದಲ್ಲಿ ಸದರಿ ಕ್ಯಾಮರಾಗಳನ್ನು ಮಾನಿಟರ್ ಮಾಡುವುದು. ದೇವಾಲಯಗಳಲ್ಲಿ ಹಾಲಿ ಅಳವಡಿಸಿರುವ ಸಿಸಿಟಿವಿ, ಡಿವಿಆರ್‌ಗಳನ್ನು ಕಳ್ಳತನ, ನಿಷ್ಕ್ರೀಯ, ಧ್ವಂಸ ಮಾಡುತ್ತಿರುವುದರಿಂದ ಹಾಗೂ ಕರ್ಪೂರವನ್ನು ಹಚ್ಚಿ ಅದರಿಂದ ಬರುವ ಕಾರ್ಬನ್‌ನಿಂದ ಕ್ಯಾಮೆರಾ ಲೆನ್ಸ್ ಗ್ಲಾಸ್ ಕಾಣದಂತೆ ಮಾಡಿ ಕಳ್ಳತನ ಮಾಡುವುದನ್ನು ತಡೆಗಟ್ಟುವ ಹಿತದೃಷ್ಟಿಯಿಂದ ಸಿಸಿಟವಿ ವೆಬ್ ಕ್ಯಾಮರಾಗಳನ್ನು ಅಳವಡಿಸುವುದು.

ಧಾರ್ಮಿಕ ದತ್ತಿ ಇಲಾಖೆಯ ಕೇಂದ್ರ ಕಛೇರಿಯಲ್ಲಿ ಸರ್ವರ್ ಅನ್ನು ಅಳವಡಿಸಿ, ವಸತಿ ಕೋಶದ ವತಿಯಿಂದ ವೆಬ್ ಕ್ಯಾಮೆರಾಗಳ ಮೂಲಕ ಎಲ್ಲಾ ದೇವಾಲಯಗಳಲ್ಲಿ ಅಳವಡಿಸಿರುವ ಕ್ಯಾಮರಾಗಳ ಮೇಲ್ವಿಚಾರಣೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು.

ಭದ್ರತಾ ಹಿತದೃಷ್ಟಿಯಿಂದ ದೇವಾಲಯಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾಗಳ ಸಂಪರ್ಕವನ್ನು ಸಂಬಂಧಪಟ್ಟ ಜಿಲ್ಲಾಧಿಕಾರಿಗಳು, ಪೊಲೀಸ್ ಅಧೀಕ್ಷಕರು ಮತ್ತು ಪೊಲೀಸ್ ಠಾಣೆಯ ಕಛೇರಿಗಳಿಗೆ ಸಂಪರ್ಕ ಕಲ್ಪಿಸಿ, ಅವುಗಳ ವೀಕ್ಷಣೆಗಾಗಿ ಸಂಚಾರ ನಿಯಂತ್ರಣ ಕೊಠಡಿಯಲ್ಲಿರುವಂತೆ ಡ್ಯಾಶ್‌ಬೋರ್ಡ್‌ಗಳ ವ್ಯವಸ್ಥೆಯನ್ನು ಕಲ್ಪಿಸುವುದು.

ಎಲ್ಲಾ ದೇವಾಲಯಗಳಲ್ಲಿ ಭಕ್ತಾದಿಗಳು ನಗದು ಅಥವಾ ಚೀಲವನ್ನು ಹೊತ್ತು ಬಂದಾಗ ಜನಸಂದಣಿಯಲ್ಲಿ ಜೇಬು ಕಳ್ಳತನದಂತಹ ಘಟನೆಗಳನ್ನು ಕಡಿಮೆ ಮಾಡಲು ಡಿಜಿಟಲ್ ಪಾವತಿ ವ್ಯವಸ್ಥೆಗೆ ಹೆಚ್ಚಿನ ಉತ್ತೇಜನ ನೀಡಲು ಕ್ಯೂಆರ್ ಕೋಡ್ ಅಳವಡಿಸುವುದು. ಅದರ ಅಡಿಯಲ್ಲಿ ಸಂಬಂಧಪಟ್ಟ ಬ್ಯಾಂಕ್‌ನ ವಿವರಗಳನ್ನು ಅಳವಡಿಸುವುದು.

ಡಿಜಿಟಲ್ ದೇಣಿಗೆ ಮತ್ತು ನಗದು ರಹಿತ ಪಾವತಿಗಳನ್ನು ಸುಗಮಗೊಳಿಸಲು, ಭಕ್ತರು ಮತ್ತು ಸಂದರ್ಶಕರು ದೇಣಿಗೆ ನೀಡಲು, ಪ್ರಸಾದ, ಸೇವಾ ಟಿಕೆಟ್‌ಗಳು ಮತ್ತು ಇತರ ದೇವಾಲಯ ಸೇವೆಗಳನ್ನು ನಗದು ರಹಿತ ವಿಧಾನಗಳ ಮೂಲಕ ಖರೀದಿಸಲು ದೇವಾಲಯಗಳಲ್ಲಿ ಸುರಕ್ಷಿತ ಯುಪಿಐ, ಭೀಮ್, ಕ್ಯೂಆರ್ ಕೋಡ್ ಮತ್ತು ಇತರ ಡಿಜಿಟಲ್ ಪಾವತಿ ಸೌಲಭ್ಯಗಳನ್ನು ಒದಗಿಸುವುದು.

ದೇವಾಲಯಗಳಲ್ಲಿ ಪಾರದರ್ಶಕತೆ, ಬಳಕೆಯ ಸುಲಭತೆ, ಸರಿಯಾದ ಲೆಕ್ಕಪರಿಶೋಧನಾ ಹಾದಿ ಮತ್ತು ಸುಧಾರಿತ ಹಣಕಾಸು ನಿರ್ವಹಣೆಯನು ಖಚಿತಪಡಿಸಿಕೊಳಲು ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ದೇವಾಲಯದ ಲೆಕಪತ್ರ ವ್ಯವಸ್ಥೆಯೊಂದಿಗೆ ಸಂಯೋಜಿಸುವುದು.

ಹುಂಡಿ ಇರುವ ಕಡೆ ಮಾತ್ರ ಕ್ಯೂಆರ್ ಕೋಡ್ ಅಳವಡಿಸುವುದು.

ಕೆಲವು ದೇವಾಲಯಗಳಲ್ಲಿ ಹುಂಡಿಗಳಿಗೆ ಅಳವಡಿಸುವ ಕ್ಯೂಆರ್ ಕೋಡ್‌ಗಳನ್ನು ದುರಪಯೋಗಪಡಿಸಿಕೊಳ್ಳುತ್ತಿರುವುದಾಗಿ ತಿಳಿದು ಬಂದಿರುವುದರಿಂದ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ಯೂಆರ್ ಕೋಡ್ ಅನ್ನು ಹಾಳು ಮಾಡದಂತೆ/ಅದರ ಮೇಲೆ ಪ್ರತ್ಯೇಕವಾಗಿ ಬೇರೆ ಕ್ಯೂಆರ್ ಕೋಡ್ ಅನ್ನು ಅಳವಡಿಸಲು ಸಾಧವಾಗದಂತೆ ಇವುಗಳನ್ನು ಸಂರಕ್ಷಿಸಲು ದೇವಾಲಯದ ಅಧಿಕಾರಿಗಳು ಕಾಲ ಕಾಲಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು.

ಹುಂಡೆ ಎಣಿಕೆಯಲ್ಲಿ ಕಂದಾಯ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಹುಂಡಿ ಎಣಿಕೆ ದಿನಾಂಕಗಳನ್ನು ಮುಂಚಿತವಾಗಿಯೇ ಕ್ಯಾಲೆಂಡರ್‌ನಲ್ಲಿ `ಹುಂಡಿ ಎಣಿಕೆ’ ದಿನಗಳನ್ನು ನಿಗದಿಪಡಿಸುವುದು.

ಹೆಚ್ಚು ದೇಣಿಗೆ/ಕಾಣಿಕೆ ಬರುವ ದೇವಾಲಯಗಳಲ್ಲಿ ವಾರಕ್ಕೆ ಒಂದು ದಿವಸ ಹಾಗೂ ಸಾಧಾರಣ ದೇಣಿಗೆ/ಕಾಣಿಕೆ ಬರುವ ದೇವಾಲಯಗಳಲ್ಲಿ ಎರಡು ವಾರಕ್ಕೆ ಒಂದು ದಿವಸ ಕಡ್ಡಾಯವಾಗಿ ಹುಂಡಿ ಎಣಿಕೆ ದಿನಾಂಕಗಳನ್ನು ಮುಂಚಿತವಾಗಿಯೇ ಕ್ಯಾಲೆಂಡರ್‌ನಲ್ಲಿ `ಹುಂಡಿ ಎಣಿಕೆ’ ದಿನಗಳನ್ನು ನಿಗದಿಪಡಿಸುವುದು.

ಹುಂಡಿ ಎಣಿಕೆಯನ್ನು ಸಂಬಂಧಪಟ್ಟ ತಹಶೀಲ್ದಾರ್‌ರವರ ಮೇಲ್ವಿಚಾರಣೆಯಲ್ಲಿ ನಡೆಸುವುದು.

ಹುಂಡಿ ಎಣಿಕೆ ಸಂದರ್ಭದಲ್ಲಿ ಸ್ವೀಕೃತವಾಗಬಹುದಾದ ಚಿನ್ನ/ ಬೆಳ್ಳಿ ಇತ್ಯಾದಿ ವಸ್ತುಗಳನ್ನು ಎಣಿಕೆ ದಿನದಂದೇ ಕಡ್ಡಾಯವಾಗಿ ಮೌಲ್ಯಮಾಪನ ಮಾಡಿಸಿ, ಅಂದೇ ಸಂಬಂಧಪಟ್ಟ ಜಿಲ್ಲಾ ಉಪಖಜಾನೆಯಲ್ಲಿ, ಸೂಕ್ತ ಮೇಲ್ವಿಚಾರಣೆಯೊಂದಿಗೆ ಜಮಾ ಮಾಡಬೇಕು.

ಹುಂಡಿ ಎಣಿಕೆ ಸಮಯದಲ್ಲಿ ಹಾಜರಿರುವ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಖಚಿತ ಪಡಿಸಿಕೊಳ್ಳಲು ಫೇಸ್ ರಿಕ್ಗನೀಶನ್ ಅನ್ನು ಅಳವಡಿಸುವುದು ಮತ್ತು ಸದರಿ ಸಿಬ್ಬಂದಿ ಮತ್ತು ಅಧಿಕಾರಿಗಳು ಎಣಿಕೆಗೆ ಪ್ರವೇಶಿಸುವ ಸಂದರ್ಭದಲ್ಲಿ ಕ್ಯಾಶ್ ಇನ್ ಹ್ಯಾಂಡ್ ಘೋಷಿಸುವುದು.

ಹುಂಡಿ ತೆರೆಯುವುದರಿಂದ, ಹುಂಡಿ ಎಣಿಕೆ ಮಾಡಿ ಬ್ಯಾಂಕಿನವರಿಗೆ ಹಸ್ತಾಂತರಿಸುವವರೆಗೆ ಸಂಪೂರ್ಣವಾಗಿ ವಿಡಿಯೋ ಚಿತ್ರೀಕರಣವನ್ನು ದಿನಾಂಕ ಮತ್ತು ಸಮಯ ದಾಖಲೆಯಾಗುವಂತೆ ಕಡ್ಡಾಯವಾಗಿ ಚಿತ್ರೀಕರಿಸುವುದು.

ಹುಂಡಿ ಎಣಿಕೆ ಪ್ರಕ್ರಿಯೆಯ ಸಂದರ್ಭದಲ್ಲಿ, ಸ್ಥಳಾಂತರಿಸಬಹುದಾದ ಹುಂಡಿಯನ್ನು ಸ್ಥಳಾಂತರಿಸುವುದರಿಂದ ಪ್ರಾರಂಭಿಸಿ, ಹುಂಡಿ ಹಣವನ್ನು ಹುಂಡಿಯಿಂದ ಹೊರ ತೆಗೆಯುವ ಹಾಗೂ ಹುಂಡಿ ಎಣಿಕೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಸಿಬ್ಬಂದಿಗೆ ಎಣಿಕೆ ಮಾಡಲು ನೀಡುವ ಹಣ ಮತ್ತು ಅವರು ಎಣಿಕೆ ಮಾಡಿದ ನಂತರ ಹಿಂದಿರುಗಿಸುವವರೆಗೆ ಸಂಪೂರ್ಣವಾಗಿ ವಿಡಿಯೋ ಚಿತ್ರೀಕರಣವನ್ನು ದಿನಾಂಕ ಮತ್ತು ಸಮಯ ದಾಖಲೆಯಾಗುವಂತೆ ಕಡ್ಡಾಯವಾಗಿ ಚಿತ್ರೀಕರಿಸುವುದು.

ಹುಂಡಿ ಎಣಿಕೆಗೆ ಸಾರ್ವಜನಿಕರ ಸೇವೆಯನ್ನು ಪಡೆಯುವುದರ ಬದಲಿಗೆ ಕಡ್ಡಾಯವಾಗಿ ಗೃಹ ರಕ್ಷಕದಳದ ಸಿಬ್ಬಂದಿಯವರ/ ಬ್ಯಾಂಕ್ ಸಿಬ್ಬಂದಿ/ಸರ್ಕಾರಿ ನೌಕರರ ಸೇವೆಯನ್ನು ಪಡೆಯುವುದು. ಖಾಸಗಿ/ಸಾರ್ವಜನಿಕರ ಸೇವೆಯನ್ನು ಹುಂಡಿ ಎಣಿಕೆಗೆ ಪಡೆಯುವಂತಿಲ್ಲ.

ಹುಂಡಿಗಳ ಎಣಿಕೆ ಸಮಯದಲ್ಲಿ ಮತ್ತು ಹುಂಡಿಗಳಲ್ಲಿ ಕಳ್ಳತನದ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಪಟ್ಟ ದೇವಾಲಯದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು.

Vishwa News 24

Recent Posts

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್ : ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ! – vishwanews24

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್: ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ!…

8 minutes ago

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  – vishwanews24

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…

3 hours ago

ಬೆಂಗಳೂರು: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…

4 hours ago

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

2 days ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

2 days ago