Featured

ರಾಜ್ಯದ ವಿಕಲಚೇತನರಿಗೆ ಮಹತ್ವದ ಮಾಹಿತಿ : KSRTCಯಿಂದ ರಿಯಾಯಿತಿ ದರದ ಬಸ್ ಪಾಸ್’ಗೆ ಅರ್ಜಿ ಆಹ್ವಾನ -Vishwanews24

ರಾಜ್ಯದ ವಿಕಲಚೇತನ’ರಿಗೆ ಮಹತ್ವದ ಮಾಹಿತಿ: KSRTCಯಿಂದ ರಿಯಾಯಿತಿ ದರದ ಬಸ್ ಪಾಸ್’ಗೆ ಅರ್ಜಿ ಆಹ್ವಾನ -Vishwanews24

ಬೆಂಗಳೂರು: ಕೆ ಎಸ್ ಆರ್ ಟಿ ಸಿಯಿಂದ 2022ನೇ ಸಾಲಿಗೆ ವಿಕಲಚೇತನರಿಂದ ರಿಯಾಯಿತಿ ದರದ ಬಸ್ ಪಾಸ್ ಗಾಗಿ  ಅರ್ಜಿಯನ್ನು ಆಹ್ವಾನಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು , 2022ನೇ ಸಾಲಿಗೆಗಾಗಿ ದಿನಾಂಕ 01-01-2022 ರಿಂದ 31-12-2022ರವೆರೆಗೆ ಮಾನ್ಯತೆ ಇರುವಂತೆ ವಿಕಲಚೇತನರಿಗೆ ಬಸ್ ಪಾಸ್ ವಿತರಿಸಬೇಕಿದೆ.
ಹೀಗಾಗಿ ಬಸ್ ಪಾಸ್ ಗಾಗಿ ಅರ್ಜಿಯನ್ನು ಆಹ್ವಾನಿಸಿರೋದಾಗಿ ತಿಳಿಸಿದೆ.

ವಿಕಲಚೇತನರು ರಿಯಾಯಿತಿದರದ ಬಸ್ ಪಾಸ್ ಗಾಗಿ  ಸೇವಾಸಿಂಧು ಪೋರ್ಟಲ್  ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. 2021ನೇ ಸಾಲಿನಲ್ಲಿ ವಿತರಿಸಲಾಗಿರುವ ಮತ್ತು ದಿನಾಂಕ 31-12-2021ರವರೆಗೆ ಮಾನ್ಯತೆ ಇರೋ ಬಸ್ ಪಾಸ್ ಗಳನ್ನು ದಿನಾಂಕ 28-02-2022ರವರೆಗೆ ಮಾತ್ಯತೆ ಮಾಡಲಾಗುವುದು ಎಂದು ಹೇಳಿದೆ.

ದಿನಾಂಕ 17-01-2022ರಿಂದ ಹೊಸ ಬಸ್ ಪಾಸ್ ವಿತರಿಸಲಾಗುತ್ತದೆ. ನವೀಕರಣ ಮತ್ತು ನೂತನ ಪಾಸುಗಳಿಗೆ ರೂ.660 ಶುಲ್ಕವನ್ನು ನಿಗದಿಪಡಿಸಲಾಗಿದೆ. ಇದನ್ನು ನಗದಾಗಿ ಇಲ್ಲವೇ ಡಿಡಿ ಮೂಲಕ ಪಾವತಿಸಬಹುದಾಗಿದೆ ಎಂದು ತಿಳಿಸಿದೆ.

ದಿನಾಂಕ 28-02-2022ರವರೆಗೆ 2021ನೇ ಸಾಲಿನಲ್ಲಿ ವಿತರಿಸಲಾಗಿರುವ ವಿಕಲಚೇತನರ ಪಾಸುಗಳ ನವೀಕರಣಕ್ಕಾಗಿ ಅವಕಾಶ ಕಲ್ಪಿಸಲಾಗಿದೆ. ಅದರಕ್ಕೂ ಮುನ್ನವೇ ವಿಕಲಚೇತನರು ಸೇವಾ ಸಿಂಧು ಪೋರ್ಟಲ್ ನಲ್ಲಿ ಹೊಸ ಹಾಗೂ ನವೀಕೃತ ರಿಯಾಯಿತಿ ದರದ ಬಸ್ ಪಾಸ್ ಗೆ ಅರ್ಜಿ ಸಲ್ಲಿಸಿ ಪಡೆಯುವಂತೆ ಕೆ ಎಸ್ ಆರ್ ಟಿ ಸಿ ತಿಳಿಸಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

3 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

4 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

4 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

5 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

6 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

6 hours ago