ಬೆಂಗಳೂರು: ಕೆ ಎಸ್ ಆರ್ ಟಿ ಸಿಯಿಂದ 2022ನೇ ಸಾಲಿಗೆ ವಿಕಲಚೇತನರಿಂದ ರಿಯಾಯಿತಿ ದರದ ಬಸ್ ಪಾಸ್ ಗಾಗಿ ಅರ್ಜಿಯನ್ನು ಆಹ್ವಾನಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು , 2022ನೇ ಸಾಲಿಗೆಗಾಗಿ ದಿನಾಂಕ 01-01-2022 ರಿಂದ 31-12-2022ರವೆರೆಗೆ ಮಾನ್ಯತೆ ಇರುವಂತೆ ವಿಕಲಚೇತನರಿಗೆ ಬಸ್ ಪಾಸ್ ವಿತರಿಸಬೇಕಿದೆ.
ಹೀಗಾಗಿ ಬಸ್ ಪಾಸ್ ಗಾಗಿ ಅರ್ಜಿಯನ್ನು ಆಹ್ವಾನಿಸಿರೋದಾಗಿ ತಿಳಿಸಿದೆ.
ವಿಕಲಚೇತನರು ರಿಯಾಯಿತಿದರದ ಬಸ್ ಪಾಸ್ ಗಾಗಿ ಸೇವಾಸಿಂಧು ಪೋರ್ಟಲ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. 2021ನೇ ಸಾಲಿನಲ್ಲಿ ವಿತರಿಸಲಾಗಿರುವ ಮತ್ತು ದಿನಾಂಕ 31-12-2021ರವರೆಗೆ ಮಾನ್ಯತೆ ಇರೋ ಬಸ್ ಪಾಸ್ ಗಳನ್ನು ದಿನಾಂಕ 28-02-2022ರವರೆಗೆ ಮಾತ್ಯತೆ ಮಾಡಲಾಗುವುದು ಎಂದು ಹೇಳಿದೆ.
ದಿನಾಂಕ 17-01-2022ರಿಂದ ಹೊಸ ಬಸ್ ಪಾಸ್ ವಿತರಿಸಲಾಗುತ್ತದೆ. ನವೀಕರಣ ಮತ್ತು ನೂತನ ಪಾಸುಗಳಿಗೆ ರೂ.660 ಶುಲ್ಕವನ್ನು ನಿಗದಿಪಡಿಸಲಾಗಿದೆ. ಇದನ್ನು ನಗದಾಗಿ ಇಲ್ಲವೇ ಡಿಡಿ ಮೂಲಕ ಪಾವತಿಸಬಹುದಾಗಿದೆ ಎಂದು ತಿಳಿಸಿದೆ.
ದಿನಾಂಕ 28-02-2022ರವರೆಗೆ 2021ನೇ ಸಾಲಿನಲ್ಲಿ ವಿತರಿಸಲಾಗಿರುವ ವಿಕಲಚೇತನರ ಪಾಸುಗಳ ನವೀಕರಣಕ್ಕಾಗಿ ಅವಕಾಶ ಕಲ್ಪಿಸಲಾಗಿದೆ. ಅದರಕ್ಕೂ ಮುನ್ನವೇ ವಿಕಲಚೇತನರು ಸೇವಾ ಸಿಂಧು ಪೋರ್ಟಲ್ ನಲ್ಲಿ ಹೊಸ ಹಾಗೂ ನವೀಕೃತ ರಿಯಾಯಿತಿ ದರದ ಬಸ್ ಪಾಸ್ ಗೆ ಅರ್ಜಿ ಸಲ್ಲಿಸಿ ಪಡೆಯುವಂತೆ ಕೆ ಎಸ್ ಆರ್ ಟಿ ಸಿ ತಿಳಿಸಿದೆ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…