ಬೆಂಗಳೂರು : ರಾಜ್ಯದ ಶಾಲಾ ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್ ಬಳಕೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೊಬೈಲ್ ಉಪಯೋಗ ಶಾಲಾ ಕಾಲೇಜುಗಳಲ್ಲಿ ದಿನೇ ದಿನೇ ಹೆಚ್ಚುತ್ತಿದ್ದು, ಇದು ಶಾಲಾ ಕಾಲೇಜುಗಳಲ್ಲಿಯ ಶೈಕ್ಷಣಿಕ ವಾತಾವರಣವನ್ನು ಹದಗೆಡಿಸುತ್ತಿದ್ದು, ಇದರ ದುಷ್ಪರಿಣಾಮ ಮಕ್ಕಳ ಮೇಲೆ ಬೀರುತ್ತಿದೆಯಲ್ಲದೇ, ಇದರಿಂದ ಕಲಿಕೆಯ ಅಮೂಲ್ಯ ಸಮಯವನ್ನು ಮೊಬೈಲ್ ಮಾತುಗಾರಿಕೆಯಲ್ಲಿ ವ್ಯಯವಾಗುತ್ತಿದೆಯೆಂಬ ಅಂಶ ಇಲಾಖೆಯ ಗಮನಕ್ಕೆ ಬಂದಿದೆ. ಅಲ್ಲದೇ ವಿದ್ಯಾರ್ಥಿಗಳು ಕ್ಲಾಸಿನಲ್ಲಿ ಮೊಬೈಲ್ ಬಳಸಿ ಸಂಗೀತ ಕೇಳುವುದು ಆಟವಾಡುವು ಹಾಗೂ ಎಸ್‌ಎಂಎಸ್ ಕಳುಹಿಸುವುದು ಮಾಡುತ್ತಿದ್ದು, ಇದರಿಂದ ತರಗತಿಗಳಲ್ಲಿ ಅಹಿತಕರ ವಾತಾವರಣ ಉಂಟಾಗಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಉಂಟಾಗುತ್ತದೆ. ಇದರೊಂದಿಗೆ ಅನೇಕ ಪಾಲಕ-ಪೋಷಕರು ಕೂಡಾ ಅನೇಕ ಸಂದರ್ಭಗಳಲ್ಲಿ ಆತಂಕ ವ್ಯಕ್ತಪಡಿಸಿರುತ್ತಾರೆಂಬ ಅಂಶ ಸಭೆಯಲ್ಲಿ ಚರ್ಚೆಯಾಗಿ ಮಕ್ಕಳ ಕಲಿಕಾ ಸಮಯದ ರಕ್ಷಣೆಯ ಕ್ರಮವಾಗಿ ಮೊಬೈಲ್ ಉಪಯೋಗವನ್ನು ನಿಷೇದಿಸಬೇಕೆಂಬ ಒಟ್ಟಾರೆ ಅಭಿಪ್ರಾಯ ಈ ಸಭೆಯಲ್ಲಿ ವ್ಯಕ್ತವಾಗಿರುತ್ತದೆ. ಆದ್ದರಿಂದ ಈ ಕೆಳಕಂಡಂತೆ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಲಾದ ಅಂಶಗಳ ಹಿನ್ನೆಲೆಯಲ್ಲಿ, ಒಂದನೇ ತರಗತಿಯಿಂದ 12ನೇ ತರಗತಿಯವರೆಗೆ (1 ರಿಂದ 10ನೇ ತರಗತಿ ಹಾಗೂ ಪ್ರಥಮ & ದ್ವಿತೀಯ ಪಿಯುಸಿ) ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರತಿಯೊಂದು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಅನ್ವಯಿಸುವಂತೆ ತಕ್ಷಣದಿಂದ ಜಾರಿಗೆ ಬರುವಂತೆ, ಮೊಬೈಲ್‌ನ್ನು ಶಾಲಾವಧಿಯಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಉಪಯೋಗಿಸುವುದನ್ನು ನಿಷೇದಿಸಲಾಗಿದೆ. ಇದರೊಂದಿಗೆ ಶಾಲಾ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಹಾಗೂ ಯಾವುದೇ ಸಿಬ್ಬಂದಿ ವರ್ಗದವರು ಕೂಡಾ ಶಾಲಾವಧಿಯಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ. ನಿಷೇಧವನ್ನು ಉಲ್ಲಂಘಿಸಿ ವಿದ್ಯಾರ್ಥಿಗಳು, ಶಿಕ್ಷಕರು-ಉಪನ್ಯಾಸಕರು ಹಾಗೂ ಸಿಬ್ಬಂದಿಯವರು ಶಾಲಾವಧಿಯಲ್ಲಿ, ಶಾಲಾ ಆವರಣದಲ್ಲಿ ಮೊಬೈಲ್ ಬಳಸಿದಲ್ಲಿ ಅಂತಹ ಮೊಬೈಲ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳತಕ್ಕದ್ದು. ಈ ನಿಷೇದವನ್ನು ಅನುಷ್ಠಾನಗೊಳಿಸಲು ಅನುಷ್ಠಾನ ಸಮಿತಿಯನ್ನು ರಚಿಸಿ, ಅವುಗಳ ಜವಾಬ್ದಾರಿ/ಅಧಿಕಾರ ವ್ಯಾಪ್ತಿ ನಿಗಧಿಪಡಿಸಿದೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…