ರಾಜ್ಯದ ಶಾಲೆಗಳ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಹಾಯಕರ 3 ತಿಂಗಳ ಸಂಭಾವನೆ ಬಿಡುಗಡೆ:  ಸುರೇಶ್ ಕುಮಾರ್ -Vishwanews24

Featured, ರಾಜ್ಯ ನ್ಯೂಸ್

ರಾಜ್ಯದ ಶಾಲೆಗಳ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವಅಡುಗೆ ಸಹಾಯಕರ 3 ತಿಂಗಳ ಸಂಭಾವನೆ 93.45 ಕೋಟಿ ಬಿಡುಗಡೆ:  ಸುರೇಶ್ ಕುಮಾರ್ -Vishwanews24

ಬೆಂಗಳೂರು : ”ರಾಜ್ಯದ ಶಾಲೆಗಳ ಮಧ್ಯಾಹ್ನ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಹಾಯಕ ಮೂರು ತಿಂಗಳ ಸಂಭಾವನೆ ಬಿಡುಗಡೆ ಮಾಡಲಾಗಿದೆ” ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

”2020ರ ಸೆಪ್ಟೆಂಬರ್ ನಿಂದ ಡಿಸೆಂಬರ್‌ವರೆಗಿನ ತ್ರೈಮಾಸಿಕ ಗೌರವ ಸಂಭಾವನೆ ಪಾವತಿಗೆ 93 ಕೋಟಿ 45 ಲಕ್ಷ ರೂಪಾಯಿಯನ್ನು ಬಿಡುಗಡೆ ಮಾಡಲಾಗಿದೆ. ಈ ಆದೇಶವನ್ನು ಜ.1ರಂದೇ ಹೊರಡಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

”2021ರ ಜನವರಿಯಿಂದ ಮಾರ್ಚ್‌ವರೆಗಿನ ಗೌರವ ಸಂಭಾವನೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ” ಎಂದು ಕೂಡಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.