Featured

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧ ಕೇಂದ್ರಗಳ ಸ್ಥಗಿತಗೊಳಿಸಿದ್ದ ಸರ್ಕಾರದ ಆದೇಶ ರದ್ದು ಪಡಿಸಿದ ಹೈಕೋರ್ಟ್​- vishwanews24

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧ ಕೇಂದ್ರಗಳ ಸ್ಥಗಿತಗೊಳಿಸಿದ್ದ ಸರ್ಕಾರದ ಆದೇಶ ರದ್ದು ಪಡಿಸಿದ ಹೈಕೋರ್ಟ್​

ಬೆಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಜನೌಷಧಿ ಕೇಂದ್ರಗಳನ್ನು (ಜೆಎಕೆ) ಮುಚ್ಚುವಂತೆ ನಿರ್ದೇಶಿಸಿ ಕಳೆದ ಮೇ 14 ರಂದು ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿ ಆದೇಶಿಸಿದೆ. ಸರ್ಕಾರದ ಆದೇಶವನ್ನು ಪ್ರಶ್ನಿಸಿ ಎಲ್‌. ರಾಕೇಶ್‌ ಮಹಾಲಿಂಗಪ್ಪ ಮತ್ತಿತರರು ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ನ್ಯಾಯಪೀಠ ಈ ಆದೇಶ ನೀಡಿದೆ.

ಅಲ್ಲದೇ, ಬಡವರಿಗೆ ನೀಡಲಾಗುವ ಔಷಧಗಳನ್ನು ಉಚಿತವಾಗಿ ನೀಡಲಾಗುತ್ತಿರಲಿ ಅಥವಾ ಕಡಿಮೆ ಬೆಲೆಗೆ ನೀಡುತ್ತಿರಲಿ, ಅದರಲ್ಲಿ ಸರ್ಕಾರದ ಒಂದು ವಿಭಾಗವು ಹಸ್ತಕ್ಷೇಪ ಮಾಡಲು ನಾವು ಅನುಮತಿ ನೀಡುವುದಿಲ್ಲ ಎಂದು ಮೌಖಿಕವಾಗಿ ಹೇಳಿದೆ.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ರಾಜ್ಯ ಸರ್ಕಾರವೇ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧವನ್ನು ಪೂರೈಸಲು ನಿರ್ಧರಿಸಿದೆ ಮತ್ತು ಆದ್ದರಿಂದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧ ಕೇಂದ್ರಗಳ ಕಾರ್ಯಾಚರಣೆ ಅನಿವಾರ್ಯವಲ್ಲ. ಅಲ್ಲದೇ, ಔಷಧ ಕೇಂದ್ರಗಳು ಹೊರಗೆ ಕಾರ್ಯನಿರ್ವಹಿಸುವುದಕ್ಕೆ ಯಾವುದೇ ತೊಂದರೆ ಇಲ್ಲ. ಆದರೆ, ಸರ್ಕಾರಿ ಆಸ್ಪತ್ರೆ ಆವರಣದೊಳಗೆ ಮಾತ್ರ ಈ ಕೇಂದ್ರಗಳ ಕಾರ್ಯಾಚರಣೆಯನ್ನು ನಿಲ್ಲಿಸಲು ಆದೇಶಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.

ಅರ್ಜಿದಾರರ ಪರ ವಕೀಲರು, ಜನೌಷಧ ಕೇಂದ್ರಗಳ ಮಾಲೀಕರ ಜತೆ ಸಮಾಲೋಚಿಸದೇ ಅಥವಾ ಎಚ್ಚರಿಕೆ ನೀಡದೆ ತರಾತುರಿಯಲ್ಲಿ ಸರ್ಕಾರ ಈ ಆದೇಶ ಜಾರಿಗೊಳಿಸಿದೆ. ಇದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಒಂದು ಸಣ್ಣ ಕೇಂದ್ರವು ಉಚಿತ ಔಷಧ ವಿತರಣೆಗೆ ಅಡ್ಡಿಯಾಗುತ್ತಿದೆ ಎಂದು ಸರ್ಕಾರ ಹೇಳುವುದನ್ನು ಒಪ್ಪಲಾಗದು. ಸರ್ಕಾರ ಮೊದಲಿಂದಲೂ ಉಚಿತವಾಗಿ ಔಷಧ ನೀಡುತ್ತಿದೆ. ಕೇಂದ್ರಗಳಿಂದ ಸರ್ಕಾರ ಉದ್ದೇಶಕ್ಕೆ ಅಡ್ಡಿಯಾಗುತ್ತಿಲ್ಲ. ಸರ್ಕಾರ ಮತ್ತು ಅರ್ಜಿದಾರರಿಬ್ಬರೂ ಸಹ ಸಾರ್ವಜನಿಕ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿವೆ ಎಂದು ಪೀಠಕ್ಕೆ ತಿಳಿಸಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago