Featured

ರಾಜ್ಯದ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ​ ನಿಷೇಧ : ದಿನೇಶ್ ಗುಂಡೂರಾವ್ ಘೋಷಣೆ – vishwanews24

ರಾಜ್ಯದ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ​ ನಿಷೇಧ : ದಿನೇಶ್ ಗುಂಡೂರಾವ್ ಘೋಷಣೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಹೋಟೆಲ್ ಹಾಗೂ ಉಪಾಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದ್ದು, ಇದು ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಬೆಳಕಿಗೆ ಬಂದಿದೆ.

ಬೆಂಗಳೂರಿನ ವಿವಿಧೆಡೆಯಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ ಸುಮಾರು 51 ರಷ್ಟು ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗಾಲಯದಲ್ಲಿ ದೃಢಪಟ್ಟ ಬೆನ್ನಲ್ಲೇ ಕರ್ನಾಟಕ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ರಾಜ್ಯದ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ​ ನಿಷೇಧಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ.

ಸುಮಾರು 251 ತಿಂಡಿ ಹೋಟೆಲ್, ಅಂಗಡಿಗಳಿಂದ ಸ್ಯಾಂಪಲ್ಸ್ ಪಡೆಯಲಾಗಿತ್ತು. ಅವುಗಳ ಪೈಕಿ 51 ಕಡೆ ಸಂಗ್ರಹಿಸಿದ್ದ ಸ್ಯಾಂಪಲ್ಸ್ ಅಸುರಕ್ಷಿತ ಎಂಬುದು ಪ್ರಯೋಗಾಲಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಪ್ಲಾಸ್ಟಿಕ್​ ಬಳಕೆಯಿಂದ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಸೇರಿದೆ ಕಾರ್ಸಿನೋಜೆನಿಕ್ ಅಂಶ ಕ್ಯಾನ್ಸರ್​​ಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.

ಇಡ್ಲಿ ತಯಾರಿಸಲು ಬಟ್ಟೆಯ ಬದಲು ಪ್ಲಾಸ್ಟಿಕ್ ಕವರ್‌ ಬಳಕೆ ಮಾಡಲಾಗುತ್ತಿದೆ. ಇದು ಕ್ಯಾನ್ಸರ್ ಕಾರಕವಾಗಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ಆರೋಗ್ಯ ಇಲಾಖೆ ಅನೇಕ ಕಡೆಗಳಿಂದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿತ್ತು. ಆ ಪೈಕಿ ಸುಮಾರು 50 ರಷ್ಟು ಸ್ಯಾಂಪಲ್ಸ್​ ವರದಿ ಬಂದಿದ್ದು, ಕಾರ್ಸಿನೋಜೆನಿಕ್ ಅಂಶ ಪತ್ತೆಯಾಗಿದೆ. ಉಳಿದ ಸ್ಯಾಂಪಲ್ಸ್​​ ವರದಿಗಾಗಿ ಕಾಯಲಾಗುತ್ತಿದೆ.

Vishwa News 24

Recent Posts

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

15 minutes ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

24 minutes ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

41 minutes ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

50 minutes ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

1 hour ago

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು – vishwanews24

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…

2 hours ago