ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರವು ಆಡಳಿತ ಸುಧಾರಣೆ ಮತ್ತು ಜಿಲ್ಲಾ ಮಟ್ಟದ ಅಭಿವೃದ್ಧಿಗೆ ವೇಗ ನೀಡುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಂಡಿದ್ದು, ಸಂಪುಟದ ಪ್ರಮುಖ 13 ಸಚಿವರಿಗೆ ವಿವಿಧ ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿಯನ್ನು ಹಂಚಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರಿಗೆ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ. ಹಿರಿಯ ಸಚಿವ ಕೆ.ಹೆಚ್. ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಹೊಣೆ ನೀಡಲಾಗಿದ್ದರೆ, ಸಚಿವ ರಾಮಲಿಂಗರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಹಾಗೂ ಮಂಡ್ಯ ಜಿಲ್ಲೆಯ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಎಂ.ಬಿ. ಪಾಟೀಲ್ ಅವರಿಗೆ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.
ಸಚಿವ ಕೆ.ಜೆ. ಜಾರ್ಜ್ ಅವರಿಗೆ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಹೊಣೆ ವಹಿಸಲಾಗಿದೆ. ರಾಜಧಾನಿಯ ಆಡಳಿತದ ದೃಷ್ಟಿಯಿಂದ ಅತ್ಯಂತ ಕೌತುಕ ಮೂಡಿಸಿದ್ದ ಬೆಂಗಳೂರು ನಗರ ಮತ್ತು ಹಾಸನ ಜಿಲ್ಲೆಯ ಉಸ್ತುವಾರಿಯನ್ನು ಹಿರಿಯ ಸಚಿವ ಕೃಷ್ಣ ಬೈರೇಗೌಡ ಅವರ ಹೆಗಲಿಗೆ ಹಾಕಲಾಗಿದೆ. ಸಚಿವ ಈಶ್ವರ ಖಂಡ್ರೆ ಅವರಿಗೆ ಬೀದರ್ ಮತ್ತು ಗದಗ ಜಿಲ್ಲೆಗಳು, ಕಿತ್ತೂರು ಕರ್ನಾಟಕ ಭಾಗದ ಪ್ರಭಾವಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ. ಕಲ್ಯಾಣ ಕರ್ನಾಟಕದ ಪ್ರಮುಖ ನಾಯಕ ಪ್ರಿಯಾಂಕ ಖರ್ಗೆಗೆ ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳನ್ನು ಹಾಗೂ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರಿಗೆ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ಹೊಣೆ ವಹಿಸಲಾಗಿದೆ.
ಕರಾವಳಿ ಮತ್ತು ಮಲೆನಾಡು ಭಾಗದ ಉಡುಪಿ, ದಕ್ಷಿಣ ಕನ್ನಡ, ಕನ್ನಡ ಮತ್ತು ಕೊಡಗು ಜಿಲ್ಲೆಗಳ ಭಾರಿ ಜವಾಬ್ದಾರಿಯನ್ನು ಸಚಿವ ಯು.ಟಿ. ಖಾದರ್ ಅವರಿಗೆ ನೀಡಲಾಗಿದೆ. ಇನ್ನು ಸಚಿವ ಬೈರತಿ ಸುರೇಶ್ ಅವರಿಗೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ಮೈಸೂರು ಭಾಗದ ಯುವ ನಾಯಕ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಉಸ್ತುವಾರಿಯನ್ನು ನೀಡಿ ಆದೇಶಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…