ಬೆಂಗಳೂರು: ಆಹಾರ ಸುರಕ್ಷತಾ ಇಲಾಖೆ 40 ಕಡೆ ತುಪ್ಪ ಸಂಗ್ರಹ ಮಾಡಿ ಪರೀಕ್ಷೆಗೆ ಒಳಪಡಿಸಿದ್ದು, ಈ ವೇಳೆ ರಾಜ್ಯದ 2 ಕಡೆ ತುಪ್ಪ ಕಲಬೆರಕೆ ಆಗಿರುವುದು ಬಹಿರಂಗವಾಗಿದೆ.
ಆಹಾರ ಮತ್ತು ಸುರಕ್ಷತಾ ಇಲಾಖೆ ಆಗಸ್ಟ್ ತಿಂಗಳಲ್ಲಿ ತುಪ್ಪವನ್ನು ಪರೀಕ್ಷೆಗೊಳಪಡಿಸಿದೆ. ರಾಜ್ಯಾದ್ಯಂತ 40 ಕಡೆ ಮಾದರಿ ಸಂಗ್ರಹಿಸಿದ ಆಹಾರ ಮತ್ತು ಸುರಕ್ಷತಾ ಇಲಾಖೆ, ಬೆಂಗಳೂರು ಮತ್ತು ಬಾಗಲಕೋಟೆಯಲ್ಲಿ ತುಪ್ಪ ಸುರಕ್ಷಿತವಲ್ಲ ಎಂದು ವರದಿ ನೀಡಿದೆ.
ಎಲ್ಲಿಯ ತುಪ್ಪ ಸೇಫ್ ಅಲ್ಲ ಎಂಬ ವರದಿ ಬಂದಿರುವ ಕಡೆ ತುಪ್ಪ ತಯಾರಿಕಾ ಘಟಕಕ್ಕೆ ಆಹಾರ ಮತ್ತು ಸುರಕ್ಷತಾ ಇಲಾಖೆ ನೋಟಿಸ್ ನೀಡಿದೆ. 30 ದಿನಗಳ ಒಳಗೆ ತುಪ್ಪ ಅಸುರಕ್ಷತೆ ಅಲ್ಲ ಎಂದು ಸಾಬೀತುಪಡಿಸಲು ಆಹಾರ ಮತ್ತು ಸುರಕ್ಷತಾ ಇಲಾಖೆ ಸೂಚನೆ ನೀಡಿದೆ.
ಇದೀಗ ದೇಶಾದ್ಯಂತ ತಿರುಪತಿ ಲಡ್ಡು ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ ರಾಜ್ಯದಲ್ಲಿ ತುಪ್ಪ ಕಲಬೆರಕೆ ಆಗಿರುವುದು ಬೆಳಕಿಗೆ ಬಂದಿದೆ. ಇನ್ನು ತಿರುಪತಿ ಲಡ್ಡಿಗೆ ಕಳಪೆ ಗುಣಮಟ್ಟದ ತುಪ್ಪ, ಪ್ರಾಣಿಗಳ ಕೊಬ್ಬು ಇರುವ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ರಾಜ್ಯದ ನಂದಿನಿ ತುಪ್ಪ ಹೊರತುಪಡಿಸಿ, ಉಳಿದ ತುಪ್ಪಗಳನ್ನು ಟೆಸ್ಟ್ ಮಾಡಲು ಆರೋಗ್ಯ ಸಚಿವರು ಸೂಚಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…