Featured

ರಾಜ್ಯದ 25 ಎ ದರ್ಜೆ ದೇವಸ್ಥಾನಗಳ ಸಮಗ್ರ ಅಭಿವೃದ್ದಿಗೆ ನೂತನ ಯೋಜನೆ ‘ದೈವ ಸಂಕಲ್ಪ’ : ಸಚಿವೆ ಶಶಿಕಲಾ ಜೊಲ್ಲೆ – Vishwanews24

ಪ್ರತಿ ವರ್ಷ 1000 ಸಿ ದರ್ಜೆಯ ದೇವಸ್ಥಾನಗಳ ಸಮಗ್ರ ಅಭಿವೃದ್ದಿ

​ರಾಜ್ಯದ ದೇವಾಲಯಗಳ ಅಭಿವೃದ್ದಿಗೆ 168 ಕೋಟಿ ವಿಶೇಷ ಅನುದಾನ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೇವಸ್ಥಾನಗಳ ಸಮಗ್ರ ಅಭಿವೃದ್ದಿಯ ಕನಸನ್ನ ರಾಜ್ಯದಲ್ಲೂ ನನಸು ಮಾಡುವ ನಿಟ್ಟಿನಲ್ಲಿ ನೂತನ ಯೋಜನೆ ‘ದೈವ ಸಂಕಲ್ಪ’ವನ್ನು ಮುಜರಾಯಿ ಇಲಾಖೆಯ ವತಿಯಿಂದ ಪ್ರಾರಂಭಿಸಲಾಗುವುದು ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ ಅವರು ಪ್ರಕಟಿಸಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಕಾಶಿಯನ್ನು ಅಭಿವೃದ್ದಿಗೊಳಿಸಿದಂತೆ ರಾಜ್ಯದಲ್ಲಿ ಅತಿ ಹೆಚ್ಚು ಭಕ್ತರು ಭೇಟಿ ನೀಡುವ 25 ದೇವಸ್ಥಾನಗಳ ಸಮಗ್ರ ಅಭಿವೃದ್ದಿಗೆ ಮಾಸ್ಟರ್‌ ಪ್ಲಾನ್‌ ರೂಪಿಸುವ ಯೋಜನೆ ಇದಾಗಿದೆ. ಮೊದಲ ಹಂತದಲ್ಲಿ 25 ದೇವಸ್ಥಾನಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ದೇವಸ್ಥಾನದ ಮೂಲಭೂತ ಸೌಕರ್ಯ, ಒಣ ಮತ್ತು ಹಸಿ ತ್ಯಾಜ್ಯ ನಿರ್ವಹಣೆ ಸೇರಿದಂತೆ ಸರ್ವತೋಮುಖ ಅಭಿವೃದ್ದಿಗೊಳಿಸುವ ಯೋಜನೆ ಇದಾಗಲಿದೆ.

ಇದನ್ನೂ ಓದಿ :

ದೇವಸ್ಥಾನಗಳಿಗೆ ಭೇಟಿ ನೀಡುವ ಭಕ್ತರಿಗೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ಸೌಲಭ್ಯಗಳನ್ನು ಕಲ್ಪಿಸಬೇಕು. ದೇವಸ್ಥಾನಕ್ಕೆ ಅವರು ನೀಡುವ ಕಾಣಿಕೆಗಳು ಪಾರದರ್ಶಕತೆಯಿಂದ ಸದುಪಯೋಗ ಆಗಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಧಾರ್ಮಿಕ ಶ್ರದ್ದಾ ಕೇಂದ್ರಗಳನ್ನು ಅಭಿವೃದ್ದಿಗೊಳಿಸುವುದು ನನ್ನ ಮಹತ್ವದ ಕನಸಾಗಿದ್ದು, ಈ ಯೋಜನೆಯ ಮೊದಲ ಹಂತದ ಅಂದಾಜು ವೆಚ್ಚ 1,140 ಕೋಟಿ ರೂಪಾಯಿಗಳಾಗಿವೆ ಎಂದು ಹೇಳಿದರು.

ಕಡಿಮೆ ಆದಾಯವಿರುವ ಸಿ ದರ್ಜೆಯ ದೇವಸ್ಥಾನಗಳ ಅಭಿವೃದ್ದಿ ಸರಿಯಾಗಿ ಅಗುತ್ತಿಲ್ಲ ಎನ್ನುವ ಹಲವಾರು ದೂರುಗಳು ಬಂದಿವೆ. ರಾಜ್ಯದಲ್ಲಿ 34,217 ಸಿ ದರ್ಜೆಯ ದೇವಸ್ಥಾನಗಳು ಇವೆ. ಪ್ರತಿ ವರ್ಷ ಇವುಗಳ ಅಭಿವೃದ್ದಿಗೆ ಸರಕಾರದ ವತಿಯಿಂದ ಅನುದಾನ ನೀಡಲಾಗುತ್ತಿದೆ. ಆದರೂ, ಸಮಗ್ರವಾಗಿ ಅಭಿವೃದ್ದಿಪಡಿಸಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ನಾವು ಪ್ರತಿವರ್ಷ 1,000 ಸಿ ದರ್ಜೆಯ ದೇವಸ್ಥಾನಗಳನ್ನು ಸಮಗ್ರ ಅಭಿವೃದ್ದಿಗೊಳಿಸಲು ಕ್ರಮ ಕೈಗೊಳ್ಳಲಿದ್ದೇವೆ. ಸರಕಾರದ ವತಿಯಿಂದ ಅನುದಾನ ಹಾಗೆಯೇ ದಾನಿಗಳ ಸಹಯೋಗದೊಂದಿಗೆ ಸಮಗ್ರ ಅಭಿವೃದ್ದಿಗೊಳಿಸಲಾಗುವುದು. ಪ್ರತಿ ವರ್ಷ ಜಿಲ್ಲೆಯಲ್ಲಿ ಬೇರೆ – ಬೇರೇ ದೇವಸ್ಥಾನಗಳನ್ನು ಅಭಿವೃದ್ದಿಗೆ ಆಯ್ಕೆ ಮಾಡಿಕೊಳ್ಳುವ ಮೂಲಕ ಎಲ್ಲಾ ಸಿ ದರ್ಜೆಯ ದೇವಸ್ಥಾನಗಳನ್ನು ಹಂತ ಹಂತವಾಗಿ ಅಭಿವೃದ್ದಿಗೊಳಿಸುವುದು ನಮ್ಮ ಗುರಿಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ :

ದೇವಾಲಯಗಳು ನಮ್ಮೊಂದಿಗೆ ಭಾವನಾತ್ಮಕವಾದ ಸಂಬಂಧ ಹೊಂದಿವೆ. ರಾಜ್ಯದ ದೇವಾಲಯಗಳ ಅಭಿವೃದ್ದಿಗೆ ವಿಶೇಷ ಕಾಳಜಿಯನ್ನ ನಮ್ಮ ಬಿಜೆಪಿ ಸರಕಾರ ವಹಿಸುತ್ತಿದೆ. ಈ ಬಾರಿಯ ಆಯವ್ಯಯದಲ್ಲಿ 119 ಕೋಟಿ ರೂಪಾಯಿಗಳ ಅನುದಾನ ನೀಡಲಾಗಿತ್ತು. ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ರಾಜ್ಯದ ದೇವಾಲಯಗಳ ಅಭಿವೃದ್ದಿಗೆ 168 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ನೀಡಿದ್ದು, ಒಟ್ಟಾರೆಯಾಗಿ ಪ್ರಸಕ್ತ ವರ್ಷ ಇದುವರೆಗೂ 287 ಕೋಟಿ ಅನುದಾನ ನೀಡಲಾಗಿದೆ. ಪ್ರತಿ ವರ್ಷ ಬಜೆಟ್‌ನಲ್ಲಿ 60 ರಿಂದ 70 ಕೋಟಿ ರೂಪಾಯಿಗಳಷ್ಟು ಅನುದಾನ ನೀಡಲಾಗುತ್ತಿತ್ತು. ಬಿಜೆಪಿ ಸರಕಾರ ನಾಲ್ಕು ಪಟ್ಟು ಹೆಚ್ಚು ಅನುದಾನ ನೀಡಿರುವ ಹಿನ್ನಲೆಯಲ್ಲಿ ಮುಜರಾಯಿ ಖಾತೆ ಸಚಿವೆಯಾಗಿ ನಾನು ಮುಖ್ಯಮಂತ್ರಿಗಳಿಗೆ ವಿಶೇಷವಾದ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ :

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

8 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago