Featured

ರಾಜ್ಯದ 4 ರೈಲು ನಿಲ್ದಾಣಗಳಿಗೆ ಸಂತರ ಹೆಸರು : ಕೇಂದ್ರ ಗೃಹ ಇಲಾಖೆಗೆ ಎಂ.ಬಿ ಪಾಟೀಲ್ ಶಿಫಾರಸು – vishwanews24

ರಾಜ್ಯದ 4 ರೈಲು ನಿಲ್ದಾಣಗಳ ಹೆಸರು ಬದಲಿಸುವಂತೆ ಕೇಂದ್ರ ಗೃಹ ಇಲಾಖೆಗೆ ಎಂ.ಬಿ ಪಾಟೀಲ್ ಶಿಫಾರಸು

ಬೆಂಗಳೂರು: ರಾಜ್ಯದ ವಿಜಯಪುರ, ಬೆಳಗಾವಿ, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿರುವ ರೈಲು ನಿಲ್ದಾಣಗಳನ್ನು ಸ್ಥಳೀಯ ಸಾಂಸ್ಕೃತಿಕ ಮಹತ್ತ್ವಕ್ಕೆ ಪೂರಕವಾಗಿ ಬದಲಿಸಿ, ಹೊಸ ನಾಮಕರಣ ಮಾಡಬೇಕೆಂದು ಸಚಿವ ಎಂ.ಬಿ ಪಾಟೀಲ್ ಅವರು ಶಿಫಾರಸು ಮಾಡಿ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.

ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ರೈಲು ನಿಲ್ದಾಣ, ಬೆಳಗಾವಿ ನಿಲ್ದಾಣಕ್ಕೆ ಶ್ರೀ ಬಸವ ಮಹಾಸ್ವಾಮೀಜಿ, ಬೀದರ್ ನಿಲ್ದಾಣಕ್ಕೆ ಚನ್ನಬಸವ ಪಟ್ಟದ್ದೇವರು ಮತ್ತು ಸೂರಗೊಂಡನಕೊಪ್ಪ ನಿಲ್ದಾಣಕ್ಕೆ ಭಾಯಗಡ ರೈಲು ನಿಲ್ದಾಣ ಎಂದು ಹೊಸ ಹೆಸರುಗಳನ್ನು ಇಡಬೇಕೆಂದು ಈ ಪತ್ರದಲ್ಲಿ ತಿಳಿಸಿದ್ದಾರೆ.

ಸರ್ಕಾರ ಈ ನಾಲ್ಕು ನಿಲ್ದಾಣಗಳಿಗೆ ಸಂತರ ಹೆಸರು ಇಡಲು ಶಿಫಾರಸು ಮಾಡಿದ್ದು, ಅದಕ್ಕೆ ಗೃಹ ಸಚಿವಾಲಯದ ಒಪ್ಪಿಗೆ ಬೇಕಾಗಿದೆ. ಹೀಗಾಗಿ ಮೂಲಸೌಕರ್ಯ ಇಲಾಖೆ ಮೂಲಕ ಪತ್ರ ರವಾನೆ ಮಾಡಲಾಗಿದೆ ಎಂದು ಪ್ರಸ್ತಾಪಿಸಿದ್ದಾರೆ.

ಈ ನಾಲ್ಕೂ ರೈಲು ನಿಲ್ದಾಣಗಳು ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ವ್ಯಾಪ್ತಿಯಲ್ಲಿವೆ. ಕರ್ನಾಟಕದ ಈ ಭಾಗಗಳಿಗೆ ಸೂಚಿಸಿರುವ ಸಂತರ ಕೊಡುಗೆ ಮೌಲಿಕವಾಗಿದೆ. ಈ ಶಿಫಾರಸನ್ನು ಅಂಗೀಕರಿಸಿ, ಮರುನಾಮಕರಣದ ಸಂಗತಿಯನ್ನು ಆದಷ್ಟು ಬೇಗ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಮನವಿ ಮಾಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago