ರಾಜ್ಯದ 7 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯಕ್ಕೆ ನೈರುತ್ಯ ಮುಂಗಾರು ಜುಲೈ 10 ರಂದು ಭಾರೀ ಮಳೆ ತರಲಿದೆ. ನಂತರದ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈ ಹಿಂದೆಯೇ ಸೂಚನೆ ನೀಡಿತ್ತು.
ಅದರಂತೆಯೇ ಗುರುವಾರ ರಾತ್ರಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಅಲ್ಲದೆ, ಮುಂದಿನ ನಾಲ್ಕು-ಐದು ದಿನ ಭಾರೀ ಮಳೆಯ ನಿರೀಕ್ಷೆ ಇದೆ. ಪಶ್ಚಿಮ ಘಟ್ಟ – ಮಲೆನಾಡನ್ನು ಹೊರತುಪಡಿಸಿ ಉಳಿದೆಡೆ ಸಾಧಾರಣ ಮಳೆಯಾಗಿದೆ.
ಮುಂಗಾರು ರಾಜ್ಯಕ್ಕೆ ಪ್ರವೇಶ ಪಡೆದು ಒಂದು ತಿಂಗಳಾಗಿದ್ದರೂ ಸಹ ಈ ವರೆಗೆ ಹೇಳಿಕೊಳ್ಳುವಂತಹ ಉತ್ತಮ ಮಳೆಯಾಗಿರಲಿಲ್ಲ. ಮುಂದಿನ ಮುರ್ನಾಲ್ಕು ದಿನ ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆ ನಿರೀಕ್ಷಿಸಲಾಗಿದೆ.
ಆರೆಂಜ್ ಅಲರ್ಟ್ ಘೋಷಣೆ :
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ಚಾಮರಾನಗರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…