Featured

ರಾಜ್ಯದ 9 ಮುಜರಾಯಿ ದೇಗುಲಗಳ ಸೇವಾಶುಲ್ಕ ಏರಿಕೆ ; ಅ.1ರಿಂದ ಜಾರಿ – vishwanews24

ದೇವಾಲಯಗಳ ಸೇವಾಶುಲ್ಕ ಹೆಚ್ಚಳ  ಆಡಳಿತ ಮಂಡಳಿ ತೀರ್ಮಾನವೇ ಹೊರತು ಸರ್ಕಾರದ ನಿರ್ಧಾರವಲ್ಲ : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕರ್ನಾಟಕದ ಮುಜರಾಯಿ ಇಲಾಖೆ  ವ್ಯಾಪ್ತಿಯ ಕೆಲ ದೇವಾಲಯಗಳ ಸೇವಾಶುಲ್ಕ ಸದ್ದಿಲ್ಲದೇ ಏರಿಕೆಯಾಗಿದ್ದು, ಇನ್ಮೇಲೆ ದೇವರ ಸೇವೆ ಭಕ್ತಾದಿಗಳ ಜೇಬು ಸುಡಲಿದೆ.

ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ 35 ಸಾವಿರ ದೇವಾಲಯಗಳಿದ್ದು, ಈ ದೇವಾಲಯಗಳ  ಪೈಕಿ 9 ದೇವಸ್ಥಾನಗಳ ಸೇವಾಶುಲ್ಕ ಏರಿಕೆ ಮಾಡಲಾಗಿದೆ. ಅಕ್ಟೋಬರ್‌ 1ರಿಂದ ಪರಿಷ್ಕೃತ ದರ ಅನ್ವಯವಾಗಲಿದೆ. ಕಳೆದ 4-5 ವರ್ಷದಿಂದ ಸೇವಾಶುಲ್ಕ ಪರಿಷ್ಕರಣೆ ಮಾಡದ, ಯಾವ ದೇವಾಲಯಗಳು ಸೇವಾಶುಲ್ಕ ‌ಪರಿಷ್ಕರಣೆಗೆ ಮನವಿ ಸಲ್ಲಿಸಿದ್ದವೋ ಆ ದೇವಾಲಯಗಳ ಸೇವಾಶುಲ್ಕವನ್ನ, ಆಗಮ ಪಂಡಿತರ ಪರಿಶೀಲನೆ ‌ನಂತರ 5-10% ವರೆಗೂ ಮುಜರಾಯಿ ಇಲಾಖೆ ಆಯುಕ್ತರು ಏರಿಕೆ ಮಾಡಿದ್ದಾರೆ. ಇದು ದೇವಾಲಯಗಳ ಆಡಳಿತ ಮಂಡಳಿ ತೀರ್ಮಾನವೇ ಹೊರತು ಸರ್ಕಾರದ ನಿರ್ಧಾರವಲ್ಲವೆಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಯಾವ್ಯಾವ ದೇವಸ್ಥಾನಗಳಲ್ಲಿ ಶುಲ್ಕ ಏರಿಕೆ?
ಬೆಂಗಳೂರು ನಗರ
* ಯೋಗ ನರಸಿಂಹಸ್ವಾಮಿ ದೇವಾಲಯ, ಮಲ್ಲೇಶ್ವರಂ
* ನಂದಿ ತೀರ್ಥ ದೇವಾಲಯ, ಮಲ್ಲೇಶ್ವರಂ
* ಮಹಾಗಣಪತಿ ದೇವಾಲಯ, ಮಲ್ಲೇಶ್ವರಂ

ಚಿಕ್ಕಬಳ್ಳಾಪುರ
* ವಿಧುರಾಶ್ವಥ ನಾರಾಯಣ ಸ್ವಾಮಿ ದೇವಾಲಯ
* ವೆಂಕಟರಮಣ ದೇವಾಲಯ, ತಲಕಾಯ ಬೆಟ್ಟ

ದಕ್ಷಿಣ ಕನ್ನಡ
* ಮಹಾಲಿಂಗೇಶ್ವರ ದೇವಾಲಯ, ಪುತ್ತೂರು
* ಕುಕ್ಕೆ ಸುಬ್ರಹ್ಮಣ್ಯ ದೇವಾಲಯ
* ಸೌತಡ್ಕ ಮಹಾಗಣಪತಿ ದೇವಾಲಯ
* ಸೂರ್ಯನಾರಾಯಣ ಸ್ವಾಮಿ ದೇವಾಲಯ, ಮರೋಳಿ

ಇನ್ನೂ ನಾಗಾರಾಧನೆ, ದೈವರಾಧನೆಗೆ ಹೆಸರಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ 2010ರಲ್ಲಿ ಸೇವಾಶುಲ್ಕ ಏರಿಕೆ ಮಾಡಲಾಗಿತ್ತು. 15 ವರ್ಷಗಳ ನಂತರ ಇದೀಗ ಸೇವಾಶುಲ್ಕ ಏರಿಕೆ ಮಾಡಲಾಗಿದೆ. ಕುಕ್ಕೆಯಲ್ಲಿ ಆಶ್ಲೇಷ ಪೂಜೆ ಸೇವೆಗೆ ಈ ಹಿಂದೆ ಇದ್ದ ದರ 400 ರೂಪಾಯಿ, ಪರಿಷ್ಕೃತ ದರ 500 ರೂ.ಗೆ ಏರಿಕೆಯಾಗಿದೆ. ನಾಗಪ್ರತಿಷ್ಠೆಗೆ ಈ ಹಿಂದೆ ಇದ್ದ ದರ 400 ರೂಪಾಯಿ. ಆದರೆ ಧಾರ್ಮಿಕ ದತ್ತಿ ಇಲಾಖೆ ಪರಿಷ್ಕೃತ ದರ 500 ರೂಪಾಯಿ ಹೆಚ್ಚಿಸಿದೆ. ಹೀಗೆ ಉಳಿದ‌ ಸೇವೆಗಳಲ್ಲೂ‌ ಭಾರೀ‌ ಹೆಚ್ಚಳ ಮಾಡಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

23 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

24 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago