ರಾಜ್ಯಪಾಲರಿಂದ ಗ್ರೀನ್‌ ಸಿಗ್ನಲ್‌ : ಸಂಜೆ 6 ಗಂಟೆಗೆ ಬಿಎಸ್ ವೈ ಪ್ರಮಾಣ ವಚನ ಸ್ವೀಕಾರ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು:ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಇಂದೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ.

ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಮಾಣ ವಚನಕ್ಕೆ ಸ್ವೀಕಾರಕ್ಕೆ ರಾಜ್ಯಪಾಲರ ಬಳಿ ಸಮಯ ಕೇಳಿದ್ದೆ. ಅದಕ್ಕೆ ಅವರು ಸಹಮತ ವ್ಯಕ್ತಪಡಿಸಿ ಪತ್ರ ಕೊಟ್ಟಿದ್ದಾರೆ. ಇಂದು ಸಂಜೆ 6 ರಿಂದ 6:15ರ ಒಳಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದೇನೆ. ಪ್ರಮಾಣ ವಚನದ ವೇಳೆ ನನ್ನೊಂದಿಗೆ ಯಾರು ಪ್ರಮಾಣ ವಚನ ಸ್ವೀಕರಿಸಬೇಕು ಎಂಬುದನ್ನು ಹೈಕಮಾಂಡ್​ ಬಳಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳತ್ತೇನೆ ಎಂದು ಹೇಳಿದರು.

ಪ್ರಮಾವಣ ವಚನ ಕಾರ್ಯಾಕ್ರಮಕ್ಕೆ ಬಿಜೆಪಿ, ಕಾಂಗ್ರೆಸ್​ ಹಾಗೂ ಜೆಡಿಎಸ್​ನ ಎಲ್ಲ ಶಾಸಕರು ಭೇಟಿ ನೀಡಬೇಕೆಂದು ವಿನಂತಿ ಮಾಡಿಕೊಳ್ಳುತ್ತಿದ್ದೇನೆ. ಅದರಲ್ಲೂ ವಿಶೇಷವಾಗಿ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಹಾಗೂ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ವಿಶೇಷವಾಗಿ ಮನವಿ ಮಾಡಿಕೊಳ್ಳುತ್ತೇನೆ. ವೈಯಕ್ತಿಕವಾಗಿ ಪತ್ರ ಹಾಗೂ ದೂರವಾಣಿ ಕರೆ ಮೂಲಕ ಅವರನ್ನು ಅಹ್ವಾನಿಸುತ್ತೇನೆ ಎಂದು ಬಿಎಸ್​ವೈ ತಿಳಿಸಿದರು.