ಬೆಂಗಳೂರು,: ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರು ನಾಮಪತ್ರ ಸಲ್ಲಿಸುತ್ತಿದ್ದಾರೆ. ಕುಪೇಂದ್ರ ರೆಡ್ಡಿ ಅವರು ನಾಮಪತ್ರ ಸಲ್ಲಿಸುತ್ತಿದ್ದಾರೆ ಎಂದರೆ ಜೆಡಿಎಸ್ ಕಾರ್ಯತಂತ್ರಗಳು ಇದ್ದೇ ಇರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಜೆಡಿಎಸ್ ಪಕ್ಷ ಎನ್‍ಡಿಎ ಕೂಟಕ್ಕೆ ಸೇರಿದ ನಂತರ ಯಾವುದೇ ಹೋರಾಟ ಮತ್ತು ತೀರ್ಮಾನಗಳನ್ನು ಜಂಟಿಯಾಗಿಯೇ ತೆಗೆದುಕೊಳ್ಳುತ್ತಿದ್ದೇವೆ. ನಿನ್ನೆ ನಮ್ಮ ಕೇಂದ್ರದ ವರಿಷ್ಠರು ಮತ್ತು ಜೆಡಿಎಸ್ ನ ರಾಜ್ಯದ ಹಿರಿಯರು ಚರ್ಚೆ ಮಾಡಿ ರಾಜ್ಯಸಭೆಗೆ 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿಯವರನ್ನು ಕಣಕ್ಕೆ ಇಳಿಸಲು ನಿರ್ಧರಿಸಿದ್ದಾಗಿ ವಿವರಿಸಿದರು. ಬಿಜೆಪಿ- ಜೆಡಿಎಸ್ ಒಟ್ಟಾಗಿ ನಮ್ಮ ಅಭ್ಯರ್ಥಿ ಗೆಲ್ಲುವ ದೃಷ್ಟಿಯಿಂದ ತಂತ್ರಗಾರಿಕೆಯನ್ನು ಮುಂದಿನ ದಿನಗಳಲ್ಲಿ ರೂಪಿಸಲಿದ್ದೇವೆ ಎಂದರು.
ಬೇಕಾದ ಹೆಚ್ಚುವರಿ ಮತಗಳ ಕುರಿತು ಚರ್ಚಿಸುತ್ತೇವೆ ಎಂದು ಪ್ರಶ್ನೆಗೆ ಉತ್ತರಿಸಿದರು. ಸಿದ್ದರಾಮಯ್ಯನವರಿಂದ ಬಜೆಟ್ ಮೂಲಕ ಏನನ್ನು ನಿರೀಕ್ಷಿಸಲು ಸಾಧ್ಯ ಎಂಬುದು ತಮಗೇ ಗೊತ್ತಿದೆ. ಖಜಾನೆ ಖಾಲಿ ಮಾಡಿಕೊಂಡು ಯಾವುದೇ ಅಭಿವೃದ್ಧಿ ಮಾಡದೆ ಇರುವ ರಾಜ್ಯ ಸರಕಾರವು ತನ್ನ ವೈಫಲ್ಯಗಳನ್ನು ಮುಚ್ಚಿ ಹಾಕಲು ದೆಹಲಿಯಲ್ಲಿ ಹೋಗಿ ನಾಟಕ ಮಾಡಿತ್ತು. ನಾಳೆ ಅವರು ಮಂಡಿಸುವ ಬಜೆಟ್ ಬಗ್ಗೆ ಜನರೂ ನಿರೀಕ್ಷೆ ಇಟ್ಟುಕೊಂಡಿಲ್ಲ; ನಮ್ಮಲ್ಲೂ ಸಹ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ, ರಾಜ್ಯದ ಹಿತದೃಷ್ಟಿಗಾಗಿ ಉತ್ತಮ ಬಜೆಟ್ ಕೊಡಬಹುದೆಂಬ ಅಪೇಕ್ಷೆ ಇಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…