Featured

ರಾಜ್ಯಸಭೆ ಘನತೆಗೆ ಮೆರುಗು ತಂದ ಡಾ| ಡಿ. ವೀರೇಂದ್ರ ಹೆಗ್ಗಡೆ ನಾಮ ನಿರ್ದೇಶನ : ಯಶ್ ಪಾಲ್ ಸುವರ್ಣ – Vishwanews24

ರಾಜ್ಯಸಭೆ ಘನತೆಗೆ ಮೆರುಗು ತಂದ ಡಾ| ಡಿ. ವೀರೇಂದ್ರ ಹೆಗ್ಗಡೆ ನಾಮ ನಿರ್ದೇಶನ : ಯಶ್ ಪಾಲ್ ಸುವರ್ಣ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಜ್ಯಸಭಾ ಸದಸ್ಯರಾಗಿ  ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರನ್ನು  ನಾಮ ನಿರ್ದೇಶನ ಮಾಡುವ ಮೂಲಕ ಚಿಂತಕರ ಚಾವಡಿ ಎಂದು ಕರೆಯಲ್ಪಡುವ ರಾಜ್ಯಸಭೆಯ ಘನತೆಗೆ ಮೆರುಗು ನೀಡಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಅನ್ನ, ಅಭಯ, ವಿದ್ಯೆ, ಶಿಕ್ಷಣದ ಮೂಲಕ ಚತುರ್ದಾನ ಪರಂಪರೆಯ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾಗಿ, ಧರ್ಮ ಜಾಗೃತಿ, ಆರೋಗ್ಯ, ಸ್ತ್ರೀ ಶಕ್ತಿ ಸಂಘಟನೆಯ ಮೂಲಕ ಮಹಿಳಾ ಸಶಕ್ತೀಕರಣ, ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಗ್ರಾಮೀಣ ಜನರ ಆರ್ಥಿಕತೆ ಸಬಲೀಕರಣ, ಮದ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಜನ ಜಾಗೃತಿ,  ವರದಕ್ಷಿಣೆ ಪಿಡುಗು ನಿಯಂತ್ರಿಸಿ ಸರಳ ವಿವಾಹ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಲವು ದಶಕಗಳಿಂದ ನಿರಂತರ ಸಾಮೂಹಿಕ ವಿವಾಹ ಆಯೋಜನೆಯ ಮೂಲಕ ಹಲವು ಕ್ಷೇತ್ರದಲ್ಲಿ ಸಮಾಜ ಸೇವೆಯ ಮೂಲಕ ಸಾಮಾಜಿಕ ಬದಲಾವಣೆಗೆ ನಾಂದಿ ಹಾಡಿದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಚಿಂತನೆ ರಾಜ್ಯ ಸಭೆಯ ಸಂಸದರಾಗಿ ದೇಶದಾದ್ಯಂತ ಕಾರ್ಯರೂಪಗೊಳ್ಳಲು ಸಹಕಾರಿಯಾಗಲಿದೆ.
ಅತ್ಯಂತ ಅರ್ಹ ವ್ಯಕ್ತಿಗೆ ಸಾಧನೆಯನ್ನು ಗುರುತಿಸಿ ಮಹತ್ವದ ಹುದ್ದೆಯನ್ನು ನೀಡಿ ಗೌರವಿಸಿದ ಪ್ರಧಾನಿ ನರೇಂದ್ರ ಮೋದಿ ಯವರಿಗೆ ಹಾಗೂ
ಮುಂದಿನ ದಿನಗಳಲ್ಲಿ ಖಾವಂದರಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಮೂಡಿ ಬರಲಿ ಎಂಬ ಶುಭ ಹಾರೈಕೆಯೊಂದಿಗೆ ಅಭಿನಂದನೆ ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

21 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

21 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

21 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

22 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

22 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago