Featured

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಇಬ್ಬರು ಶಾಸಕರನ್ನು ಸದಸ್ಯತ್ವದಿಂದ ಉಚ್ಚಾಟಿಸಿ ದ ಜೆಡಿಎಸ್‌ – Vishwanews24

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಇಬ್ಬರು ಶಾಸಕರನ್ನು ಸದಸ್ಯತ್ವದಿಂದ ಉಚ್ಚಾಟಿಸಿ ದ ಜೆಡಿಎಸ್‌

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಇಬ್ಬರು ಶಾಸಕರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ.

ಕೋಲಾರ ಶಾಸಕ ಕೆ. ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಉಚ್ಚಾಟನೆಗೊಂಡವರು. ಶಾಸಕ ಬಂಡೆಪ್ಪ ಕಾಶೆಂಪುರ ಅಧ್ಯಕ್ಷತೆಯಲ್ಲಿ ನಡೆದ ಪಕ್ಷದ ರಾಜ್ಯ ಘಟಕದ ಪ್ರಮುಖರ ಸಭೆಯಲ್ಲಿ ಉಭಯ ಶಾಸಕರನ್ನು ಉಚ್ಚಾಟಿಸುವ ಸಂಬಂಧ ಕೈಗೊಂಡ ನಿರ್ಣಯ ಆಧರಿಸಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಉಚ್ಚಾಟನೆಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಪಕ್ಷಾಂತರ ನಿಷೇಧ ಕಾಯ್ದೆಯಡಿ ಇಬ್ಬರನ್ನೂ ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸುವ ಸಲುವಾಗಿ ಮುಂದಿನ ಮೂರು ದಿನಗಳೊಳಗಾಗಿ ವಿಧಾನಸಭಾ ಅಧ್ಯಕ್ಷರಿಗೆ ದೂರು ನೀಡಲು ಈ ವೇಳೆ ನಿರ್ಧರಿಸಲಾಗಿದೆ.

ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಡಿ. ಕುಪೇಂದ್ರ ರೆಡ್ಡಿ ಅವರಿಗೆ ಮತ ಚಲಾಯಿಸಬೇಕೆಂಬ ವಿಪ್‌ನ್ನು ಪಕ್ಷ ಹೊರಡಿಸಿದ್ದರೂ, ಈ ಇಬ್ಬರೂ ವಿಪ್ ಉಲ್ಲಂಘಿಸಿ ಬೇರೆ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಿದ್ದರು.

ಗುಬ್ಬಿ ಶ್ರೀನಿವಾಸ್‌ ಅವರು ಪ್ರಥಮ ಪ್ರಾಶಸ್ತ್ಯದ ಮತವನ್ನು ಬಿಜೆಪಿ ಅಭ್ಯರ್ಥಿ ಲಹರ್‌ ಸಿಂಗ್‌ ಅವರಿಗೆ ಮತ್ತು ದ್ವಿತೀಯ ಪ್ರಾಶಸ್ತ್ಯದ ಮತವನ್ನು ಕಾಂಗ್ರೆಸ್‌ ಅಭ್ಯರ್ಥಿ ಮನ್ಸೂರ್‌ ಅಲಿ ಖಾನ್‌ ಅವರಿಗೆ ಚಲಾಯಿಸಿದ್ದರು.

ಕೆ. ಶ್ರೀನಿವಾಸ ಗೌಡ ಪ್ರಥಮ ಪ್ರಾಶಸ್ತ್ಯದ ಮತವನ್ನು ಕಾಂಗ್ರೆಸ್‌ ಅಭ್ಯರ್ಥಿ ಮನ್ಸೂರ್‌ ಅಲಿ ಖಾನ್‌ಗೆ ಹಾಗೂ ದ್ವಿತೀಯ ಪ್ರಾಶಸ್ತ್ಯದ ಮತವನ್ನು ಬಿಜೆ‍ಪಿಯ ಲೆಹರ್‌ ಸಿಂಗ್‌‌ಗೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರೂ ಶಾಸಕರು ಇದೀಗ ಜೆಡಿಎಸ್‌ನಿಂದ ಉಚ್ಚಾಟಿಸಲ್ಪಟ್ಟಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

21 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

22 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

22 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

22 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

22 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago