ರಾಜ್ಯಸಭೆ ಚುನಾವಣೆ: ಪ್ರಕಾಶ್‌ ಶೆಟ್ಟಿಗೆ ಬಿಜೆಪಿ ಮಣೆ: vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂ.19 ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ರಾಜ್ಯ ಕೋರ್‌ ಕಮಿಟಿ ಶನಿವಾರ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದ್ದು, ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ರವಾನಿಸಲಿದೆ.

ಪಕ್ಷದ ಅಭ್ಯರ್ಥಿಯಾಗಿ ಮಂಗಳೂರು ಮೂಲದ ಹೋಟೆಲ್ ಉದ್ಯಮಿ ಬಂಜಾರಾ ಪ್ರಕಾಶ್‌ ಶೆಟ್ಟಿ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಮತ್ತೊಂದು ಸ್ಥಾನಕ್ಕೆ ಹಾಲಿ ಸದಸ್ಯ ಪ್ರಭಾಕರ ಕೋರೆ ಅಥವಾ ಮಾಜಿ ಸಂಸದ ರಮೇಶ್‌ ಕತ್ತಿ ಹೆಸರನ್ನು ಪರಿಗಣಿಸುವಂತೆ ಶಿಫಾರಸು ಮಾಡಲಾಗಿದೆ.