ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದ ಇನ್ಫೋಸಿಸ್ ಮುಖ್ಯಸ್ಥ ನಾರಾಯಣ ಮೂರ್ತಿ ಪತ್ನಿ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಸಭೆ ಅಧ್ಯಕ್ಷ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಪ್ರಮಾಣ ವಚನ ಭೋಧಿಸಿದರು.
ಜಗದೀಪ್ ಧನಕರ್ ಅವರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಧಾಮೂರ್ತಿ ಅವರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಇನ್ಫೋಸಿಸ್ ಫೌಂಡೇಷನ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಕೂಡಾ ಭಾಗಿಯಾಗಿದ್ದು ವಿಶೇಷವಾಗಿತ್ತು. ಕೇಂದ್ರ ಸಚಿವ ಪಿಯೂಷ್ ಗೋಯಲ್, ನಂದನ್ ನೀಲಕೇಣಿ ಈ ವೇಳೆ ಉಪಸ್ಥಿತರಿದ್ದರು.
ಈ ವರ್ಷದ ಅಂತರಾಷ್ಟ್ರೀಯ ಮಹಿಳಾ ದಿನದಂದು ಸಮಾಜಸೇವಕಿ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿತ್ತು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ನರೇಂದ್ರ ಮೋದಿ, ಭಾರತದ ರಾಷ್ಟ್ರಪತಿಗಳು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ ಎಂದು ಹೇಳಿದ್ದರು. ಸಮಾಜಸೇವೆ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಅವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಾರಿ ಶಕ್ತಿಗೆ ಪ್ರಬಲವಾದ ಸಾಕ್ಷಿಯಾಗಲಿದೆ ಎಂದು ಹೇಳಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…