Featured

ರಾಜ್ಯಾದ್ಯಂತ ನಾಳೆಯಿಂದ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ – vishwanews24

ರಾಜ್ಯಾದ್ಯಂತ ನಾಳೆಯಿಂದ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ

ಬೆಂಗಳೂರು : ನಾಳೆಯಿಂದ ನವರಾತ್ರಿ ಶುರುವಾಗುತ್ತಿದೆ. ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಸದ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರ ತನಕ ದಸರಾ ರಜೆ ಘೋಷಿಸಿದ್ದು  ನಾಳೆಯಿಂದಲೇ ಮಕ್ಕಳಿಗೆ ದಸರಾ ರಜೆ ಆರಂಭವಾಗಲಿದೆ. ಒಟ್ಟು 17 ದಿನ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಇರಲಿದೆ.

2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್ 3 ರಿಂದ 20 ರವರೆಗೆ ಇರಲಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಇದ್ದು, ಕಾರ್ಯಕ್ರಮದ ನಂತರ ರಜೆಗಳು ಆರಂಭವಾಗಲಿದೆ. ಇನ್ನು ದಸರಾ ರಜೆ ಬಳಿಕ ಅಕ್ಟೋಬ‌ರ್ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. 2024- 2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.

ಕರ್ನಾಟಕದಲ್ಲಿ 2024-25ರ ಶೈಕ್ಷಣಿಕ ವರ್ಷವು ಮೇ 29ರಿಂದ ಪ್ರಾರಂಭವಾಗಿದ್ದು, ಮೊದಲ ಅವಧಿಯು ಅಕ್ಟೋಬರ್​​ 2ರ ತನಕ ಇತ್ತು. ಸೆಪ್ಟೆಂಬರ್​ 23ರಿಂದ ಮಧ್ಯಂತರ ಪರೀಕ್ಷೆಗಳು ಶುರುವಾಗಿ ಸೆಪ್ಟೆಂಬರ್​ 30ರ ತನಕ ನಡೆದಿವೆ. ಆ ಬಳಿಕ ಸರ್ಕಾರಿ ಮತ್ತು ಖಾಸಗಿ ಶಾಲಾ ಮಕ್ಕಳಿಗೆ ದಸರಾ ರಜೆ ಪ್ರಕ್ರಿಯೆ ಶುರುವಾಗಿದೆ. ಅಕ್ಟೋಬರ್​ 2ರಂದು ಎಲ್ಲಾ ಶಾಲೆಗಳಲ್ಲೂ ಗಾಂಧಿ ಜಯಂತಿ ಆಚರಿಸಿದ ಮರು ದಿನದಿಂದ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದೆ. ಅಕ್ಟೋಬರ್​ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

23 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago