ರಾಜ್ಯಾದ್ಯಂತ ಪ್ರವಾಹ : ಸಂಕಷ್ಟಕ್ಕೆ ಸಿಲುಕಿದವರಿಗೆ ನೆರವಾಗುವ ಅಗತ್ಯ ತುರ್ತು ಕ್ರಮ ತ್ವರಿತವಾಗಿ ಮಾಡಿ :ಮುಖ್ಯಕಾರ್ಯದರ್ಶಿಗೆ ಸಿಎಂ -Vishwanews24

ಬೆಂಗಳೂರು: ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ತುರ್ತು ಕ್ರಮ ಕೈಗೊಳ್ಳಲು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಪೂರ್ಣಅಧಿಕಾರವನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.

 

ರಾಜ್ಯದ ಕಾವೇರಿ ಕೊಳ್ಳ ಭಾಗ, ಮಲೆನಾಡು, ಉತ್ತರ ಕರ್ನಾಟಕ ಭಾಗದಲ್ಲಿ ಆಶ್ಲೇಷಾ ಮಳೆಯಬ್ಬರ ಮುಂದುವರಿದಿದ್ದು, ಸಂಕಷ್ಟಕ್ಕೆ ಸಿಲುಕಿದವರಿಗೆ ನೆರವಾಗುವ ಅಗತ್ಯ ತುರ್ತು ಕ್ರಮ ಕೈಗೊಳ್ಳಬಹುದು ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್‌ ಅವರಿಗೆ ತಿಳಿಸಿದ್ದಾರೆ.

ಇನ್ನು ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್‌, ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಉಂಟಾಗಿರುವ ನಷ್ಟದ ಅಂದಾಜು ಮಾಡಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೋವಿಡ್ 19 ಕಾರಣದಿಂದ ಮಣಿಪಾಲ ಆಸ್ಪತ್ರೆಯಲ್ಲಿದ್ದೇ ಪರಿಸ್ಥಿತಿಯ ಪೂರ್ಣ ಮಾಹಿತಿ ಪಡೆದು ಸಿಎಂ ಪಡೆದುಕೊಳ್ಳುತ್ತಿದ್ದಾರೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಶುಕ್ರವಾರ ಅನಾಹುತ ನಡೆದ ತಲಕಾವೇರಿಗೆ ಭೇಟಿ ನೀಡಿದ್ದರು. ಅವರಿಗೆ ದೂರವಾಣಿ ಕರೆ ಮಾಡಿದ ಸಿಎಂ, ಕೊಡಗಿನ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದರು.

ಇನ್ನು ಮುಖ್ಯಮಂತ್ರಿಯವರ ನಿರ್ದೇಶನದ ಮೇರೆಗೆ, ಜಿಲ್ಲಾ ಉಸ್ತುವಾರಿ ಸಚಿವರು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಮಳೆ ಪೀಡಿತ ಪ್ರದೇಶಗಳಿಗೆ ತೆರಳಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಅದರ ಬಗ್ಗೆಯೂ ಸಿಎಂ ಅವಲೋಕಿಸಿ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

15 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

16 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

18 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

18 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

19 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

19 hours ago