ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ ; 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಫೋಷಣೆ.. Vishwanews24
ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭಾರೀ ಮಳೆ
ದಕ್ಷಿಣ ಕನ್ನಡ ಉಡುಪಿಯಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ
18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಫೋಷಣೆ..
ದಕ್ಷಿಣ ಕನ್ನಡ ಉಡುಪಿಯಲ್ಲಿ ಜೂನ್ 25 ರವರೆಗೆ ಗುಡುಗು ಸಹಿತ ಭಾರೀ ಮಳೆ
ಬೆಂಗಳೂರು: ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ರಾಜ್ಯಾದ್ಯಂತ ಮಳೆಯಾಗುವ ಹಿನ್ನೆಲೆ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಫೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಜೂನ್ 25 ರವರೆಗೆ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆಯಿದೆ.
ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ವಿಜಯಪುರ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
