Featured

ರಾಜ್ಯಾದ್ಯಂತ 45 ಐಸ್‌ಕ್ರೀಂ ಘಟಕಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಹಲವು ಕಡೆ ನಿಯಮ ಉಲ್ಲಂಘನೆ ಪತ್ತೆ – vishwanews24

ರಾಜ್ಯಾದ್ಯಂತ 45 ಐಸ್‌ಕ್ರೀಂ ಘಟಕಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಹಲವು ಕಡೆ ನಿಯಮ ಉಲ್ಲಂಘನೆ ಪತ್ತೆ

70 ಆಹಾರ ಮಾದರಿಗಳ ಸಂಗ್ರಹ, ಪ್ರಯೋಗಾಲಯಕ್ಕೆ ರವಾನೆ

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗವು ಗುರುವಾರ ರಾಜ್ಯಾದ್ಯಂತ 45 ಐಸ್ ಕ್ರೀಂ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಈ ವೇಳೆ ಬೆಂಗಳೂರಿನ ಎರಡು, ಮೈಸೂರು ಮತ್ತು ರಾಯಚೂರಿನ ಒಂದು 45 ಐಸ್ ಕ್ರೀಂ ತಯಾರಿಕಾ ಘಟಕದಲ್ಲಿ FSSAI ಕಾಯ್ದೆಯನ್ನು ಉಲಂಘಿಸಿರುವುದು ಕಂಡುಬಂದಿದೆ ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಪ್ರಕಟನೆ ತಿಳಿಸಿದೆ.

ಪರಿಶೀಲನೆಯ ವೇಳೆ ಬೆಂಗಳೂರಿನ ಜಯನಗರ 3ನೇ ಬ್ಲಾಕ್ ನಲ್ಲಿರುವ ಸಾವರ ಐಸ್ ಕ್ರೀಂ ಕೆಫೆ, ಬಿಳೇಕಹಳ್ಳಿಯ ಬನ್ನೇರುಘಟ್ಟ ರಸ್ತೆಯ ಎಂ.ಎನ್. ಎಂಟರ್ಪ್ರೈಸಸ್, ಮೈಸೂರಿನ ಜಾನ್ ಕ್ಯಾಂಡಿ ಐಸ್ ಕ್ರೀಂ ತಯಾರಿಕಾ ಘಟಕ ಮತ್ತು ರಾಯಚೂರಿನ ಜೆಮಿನಿ ಐಸ್ ಕ್ರೀಂ ತಯಾರಿಕಾ ಘಟಕಗಳಲ್ಲಿ FSSAI ಕಾಯ್ದೆಯನ್ನು ಉಲಂಘಿಸಿರುವುದು ಕಂಡುಬಂದಿದೆ. ಈ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006 ಹಾಗೂ 2011 ನಿಯಮಗಳು/ನಿಬಂಧನೆಗಳನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟನೆ ತಿಳಿಸಿದೆ.

ಇದನ್ನೂ ಓದಿ :

70 ಆಹಾರ ಮಾದರಿಗಳ ಸಂಗ್ರಹ

ಈ ವಿಶೇಷ ತಪಾಸಣೆಯ ವೇಳೆ ವಿವಿಧ ಐಸ್ ಕ್ರೀಂ ತಯಾರಿಕಾ ಘಟಕಗಳಿಂದ ಐಸ್ ಕ್ರೀಂ, ಹಾಲು, ಹಾಲಿನ ಪುಡಿ, ಫ್ಲೇವರಿಂಗ್ ಪದಾರ್ಥಗಳು, ಸಕ್ಕರೆ, ವಿವಿಧ ಆಹಾರ ಸೇರ್ಪಡೆ ಪದಾರ್ಥಗಳು ಹಾಗೂ ಇತರ ಕಚ್ಚಾ ವಸ್ತುಗಳನ್ನು ಒಳಗೊಂಡಂತೆ ಒಟ್ಟು 70 ಆಹಾರ ಮಾದರಿಗಳನ್ನು ಸಂಗ್ರಹಿಸಿ, ಅವುಗಳ ಗುಣಮಟ್ಟ ಹಾಗೂ ಆಹಾರ ಸುರಕ್ಷತಾ ಮಾನದಂಡಗಳನ್ನು ಪರಿಶೀಲಿಸುವುದಕ್ಕಾಗಿ ಆಹಾರ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ.

ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ

ಪರಿಶೀಲನೆ ವೇಳೆ ಅವಧಿ ಮೀರಿದ ಐಸ್ಕ್ರೀಂ, ಹಾಲು, ಬಿಸ್ಕತ್ ಮತ್ತು ಕೊಬ್ಬರಿ ಪುಡಿ ಪತ್ತೆಯಾಗಿವೆ. ಇದಲ್ಲದೇ ಆಹಾರ ಉತ್ಪನ್ನಗಳ ಮೇಲೆ ಲೇಬಲಿಂಗ್ ನಿಯಮಗಳನ್ನು ಸರಿಯಾಗಿ ಪಾಲಿಸದಿರುವುದೂ ಅಧಿಕಾರಿಗಳ ಗಮನಕ್ಕೆ ಬಂದಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ. ಖಾದರ್ ಅವರ ನಿರ್ದೇಶನದಂತೆ ಆಹಾರ ಪದಾರ್ಥಗಳ ಗುಣಮಟ್ಟ ಮತ್ತು ಸುರಕ್ಷತೆಯ ಪರಿಶೀಲನೆಗಾಗಿ ಈ ದಾಳಿ ನಡೆಸಲಾಗಿದೆ.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಐಸ್ಕ್ರೀಂ ತಯಾರಿಕಾ ಘಟಕಗಳ ಮೇಲೆ ಇಂತಹ ವಿಶೇಷ ತಪಾಸಣೆ ಕಾರ್ಯಾಚರಣೆಗಳನ್ನು ಮುಂದುವರಿಸಲಾಗುವುದು ಹಾಗೂ ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಇಲಾಖೆಯ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ :

 

Vishwa News 24

Recent Posts

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ -vishwanews24

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ ವಿದೇಶಿ ಕಂಪೆನಿ ಸೇರಿದಂತೆ ಹತ್ತಾರು ಸಂಸ್ಥೆಗಳ ಭಾಗಹಿಸುವಿಕೆ ಕಾಪು: ಯುವಜನತೆಗೆ ಉದ್ಯೋಗಾವಕಾಶ…

4 hours ago

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ -vishwanews24

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು…

2 days ago

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ – vishwanews24

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…

4 days ago

ಸಂಬಂಧಿಕರನ್ನು ಬೀಳ್ಕೊಡಲು ಬಂದ 12 ಮಂದಿ ವಂದೇ ಭಾರತ್‌ ರೈಲಲ್ಲಿ ಲಾಕ್‌ ; 36 ಸಾವಿರ ದಂಡ – vishwanews24

ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…

4 days ago

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹ 20ರವರೆಗೆ ಕಡಿತ – vishwanews24

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…

4 days ago

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು -vishwanews24

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು ನವದೆಹಲಿ: ಸೌದಿ ಅರೇಬಿಯಾದಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಡಿಗೋ…

4 days ago