Featured

ರಾಜ್ಯಾಧ್ಯಂತ ನಾಳೆಯಿಂದ ‘ಸರ್ಕಾರಿ ನೌಕರ’ರ ಮುಷ್ಕರ: ‘ಸರ್ಕಾರಿ ಸೇವೆ’ಯಲ್ಲಿ ಭಾರೀ ವ್ಯತ್ಯಯ – Vishwanews24

ರಾಜ್ಯಾಧ್ಯಂತ ನಾಳೆಯಿಂದ ‘ಸರ್ಕಾರಿ ನೌಕರ’ರ ಮುಷ್ಕರ: ‘ಸರ್ಕಾರಿ ಸೇವೆ’ಯಲ್ಲಿ ಭಾರೀ ವ್ಯತ್ಯಯ

ಬೆಂಗಳೂರು: ನಾಳೆಯಿಂದ 7ನೇ ವೇತನ ಆಯೋಗದ ಶಿಫಾರಸ್ಸುಗಳ ಜಾರಿ, ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೇ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸುವಂತೆ ಒತ್ತಾಯಿಸಿ, ರಾಜ್ಯ ಸರ್ಕಾರಿ ನೌಕರರು  ಮುಷ್ಕರ ನಡೆಸಲಿದ್ದಾರೆ.

ಈ ಹಿನ್ನಲೆಯಲ್ಲಿ ನಾಳೆಯಿಂದ ರಾಜ್ಯಾಧ್ಯಂತ ಸರ್ಕಾರಿ ಸೇವೆಯಲ್ಲಿ  ಭಾರೀ ವ್ಯತ್ತಯ ಉಂಟಾಗೋ ಸಾಧ್ಯತೆ ಇದೆ.

ನಾಳೆ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿ, ಎನ್ ಪಿಎಸ್ ( NPS ) ರದ್ದುಗೊಳಿಸಿ ಹಳೇ ಪಿಂಚಣಿ ವ್ಯವಸ್ಥೆ ( OPS ) ಜಾರಿಗೊಳಿಸಿ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿಯ ಮುಷ್ಕರ ನಡೆಸಲಿದ್ದಾರೆ. ಈ ಮುಷ್ಕರದಲ್ಲಿ ಸಚಿವಾಲಯ ಸೇರಿ ಗ್ರಾಮ ಪಂಚಾಯ್ತಿಯಿಂದ ಹಿಡಿದು, ವಿಧಾನಸೌಧದವರೆಗಿನ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರಾಗಲಿದ್ದಾರೆ. ಈ ಹಿನ್ನಲೆಯಲ್ಲಿ ಸರ್ಕಾರಿ ಸೇವೆಗಳಲ್ಲಿ ವ್ಯತ್ಯ ಸಾಧ್ಯತೆ ಇದೆ.

ಸರ್ಕಾರಿ ನೌಕರರ ಸಂಘಕ್ಕೆ ಮುಷ್ಕರ ಕೈಬಿಡುವಂತೆ ಸರ್ಕಾರ ಮನವಿ ಮಾಡಿದ್ದರೂ, ತಮ್ಮ ಹೋರಾಟವನ್ನು ಕೈಬಿಡೋದಿಲ್ಲ ಎಂಬುದಾಗಿ ನೌಕರರ ಸಂಘವು ತಿಳಿಸಿದೆ. ಸರ್ಕಾರಿ ನೌಕರರ ಸಂಘದ ಪ್ರತಿಭಟನೆ ರಾಜ್ಯ ರಸ್ತೆ ಸಾರಿಗೆ ನೌಕರರಿಂದಲೂ ಸಾಥ್ ನೀಡಲಾಗಿದೆ. ಅಲ್ಲದೇ ಆರೋಗ್ಯ ಇಲಾಖೆಯ ನೌಕರರು ಬೆಂಬಲ ನೀಡಿದ್ದಾರೆ. ಹೀಗಾಗಿ ರಾಜ್ಯಾಧ್ಯಂತ ಆರೋಗ್ಯ ಸೇವೆಯಲ್ಲಿ ತೀವ್ರ ವ್ಯತ್ಯಯವಾಗುವ ಸಾಧ್ಯತೆಗಳಿವೆ.

 

Vishwa News 24

Recent Posts

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

11 hours ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

12 hours ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

13 hours ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

13 hours ago

ನಾಳೆ SSLC ಫಲಿತಾಂಶ  ಪ್ರಕಟ – vishwanews24

ನಾಳೆ SSLC ಫಲಿತಾಂಶ  ಪ್ರಕಟ ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ  ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…

1 day ago

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ ; ಬಾಲಕಿ ಸಾವು -vishwanews24

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್‌ ರಸ್ತೆಯಿಂದ ರಾಷ್ಟ್ರೀಯ…

1 day ago