ರಾಮನಗರ: ರಾಜ್ಯದಲ್ಲಿ 2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆ ನನ್ನ ಜೀವನದ ಕೊನೆಯ ಹೋರಾಟ. ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವಂತೆ ಪಕ್ಷ ಸಂಘಟಿಸಲು ಸಂಕ್ರಾಂತಿ ಮರುದಿನ ರಾಮನಗರ ಕ್ಷೇತ್ರದಿಂದಲೇ ಚಾಲನೆ ನೀಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ನಗರದ ವಿಶ್ವನಾಥ ಕಲ್ಯಾಣ ಮಂಟಪದಲ್ಲಿ ರಾಮನಗರ ಕ್ಷೇತ್ರ ವ್ಯಾಪ್ತಿಯ ಗ್ರಾಪಂ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ರಾಮನಗರ ನನಗೆ ರಾಜಕೀಯವಾಗಿ ಪುನರ್ ಜನ್ಮ ನೀಡಿದ ಕ್ಷೇತ್ರ. ಹೀಗಾಗಿ ಜಾಲಮಂಗಲದ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ನನ್ನಿಂದಾಗಿರುವ ಅಪಚಾರ ಮನ್ನಿಸುವಂತೆ ಕುಟುಂಬ ಸಮೇತಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹೊಸ ರಾಜಕೀಯ ಆರಂಭಿಸುತ್ತೇನೆ ಎಂದರು.
ಬದಲಾದ ರಾಜಕೀಯ ಸನ್ನಿವೇಶದಲ್ಲಿ ವಿಧಿಯಿಲ್ಲದೆ ಕಾಂಗ್ರೆಸ್ ಜತೆ ಕೈಜೋಡಿಸಿ ಮೈತ್ರಿ ಸರ್ಕಾರ ರಚಿಸಿದೆವು. ದೋಸ್ತಿ ಸರ್ಕಾರ ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ನಾನು ವೇದಿಕೆಯಲ್ಲಿ ಸಾರ್ವಜನಿಕವಾಗಿ ಕಣ್ಣೀರು ಹಾಕುವ ಸನ್ನಿವೇಶ ಬಂತು. ಬಹುಶಃ ರಾಜಕೀಯ ಇತಿಹಾಸದಲ್ಲಿ ಮುಖ್ಯಮಂತ್ರಿಯಾದ ಒಂದೇ ತಿಂಗಳಲ್ಲಿ ಕಣ್ಣೀರು ಹಾಕಿದವನು ನಾನೊಬ್ಬನೇ ಇರಬೇಕು. ಕಾಂಗ್ರೆಸ್ ಜತೆ ಕೈಜೋಡಿಸಿ ಮೈತ್ರಿ ಸರ್ಕಾರ ರಚಿಸಿದ್ದರಿಂದಾದ ತಪ್ಪಿನ ಅರಿವಾಗಿದೆ. ದೋಸ್ತಿ ಸರ್ಕಾರಕ್ಕೆ ಬಂಡೆ ರೀತಿ ಆಸರೆಯಾಗಿ ನಿಂತಿದ್ದೇವೆಂದು ಪರೋಪಕಾರ ಮಾಡಿದವರಂತೆ ಪ್ರಚಾರ ಪಡೆದವರೇ ನನ್ನ ಮೇಲೆ ಕಲ್ಲು ಚಪ್ಪಡಿ ಎಳೆದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು ಕುಮಾರಸ್ವಾಮಿ.
ಜೆಡಿಎಸ್ ಬಲಿಷ್ಠವಾಗಿದ್ದ ಕ್ಷೇತ್ರಗಳಲ್ಲೇ ಮೈತ್ರಿ ಸರ್ಕಾರದ ಅವಧಿ ದುರುಪಯೋಗ ಪಡಿಸಿಕೊಂಡ ಕಾಂಗ್ರೆಸ್ ಪ್ರಾಬಲ್ಯ ಕಂಡುಕೊಳ್ಳಲು ವೇದಿಕೆ ಸಿದ್ಧಪಡಿಸಿಕೊಂಡಿತು. ಇದೇ ಕಾರಣಕ್ಕೆ ಪಕ್ಷಕ್ಕೆ ಚುನಾವಣೆಗಳಲ್ಲಿ ಹಿನ್ನಡೆಯಾಗುತ್ತಿದೆ. ನಾವು ಮಾಡಿದ ಲೋಪಗಳಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ದೋಷಿಗಳಿಲ್ಲ. ನನ್ನಿಂದಾಗಿರುವ ತಪ್ಪಿನ ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದೇನೆ ಎಂದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…