ರಾಮನಗರ: “ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವಾಗಲೂ ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗ ಲೋಕಸಭೆ, ವಿಧಾನಸಭೆ ಹಾಗೂ ನಗರ ಸ್ಥಳೀಯ ಸಂಸ್ಥೆ ಚುನಾವಣೆ ಏಕೆ ಮುಂದೂಡಲಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯ ಸರ್ಕಾರದ ಬೇಜವಾಬ್ದಾರಿ ನಡವಳಿಕೆ ಹಾಗೂ ಅವೈಜ್ಞಾನಿಕ ಕ್ರಮಗಳಿಂದಾಗಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದಕ್ಕೆ ಕಾರಣವಾಗಿದ್ದು, ರಾಜ್ಯ ಸರ್ಕಾರ ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಹಲವಾರು ನಿಯಮಗಳನ್ನು ಜಾರಿಗೆ ತಂದಿದೆ. ಹೀಗಿದ್ದರೂ ನಿಯಮಗಳನ್ನು ಉಲ್ಲಂಘಿಸಿ ಲೋಕಸಭೆ, ವಿಧಾನಸಭೆ ಹಾಗೂ ನಗರ ಸ್ಥಳೀಯ ಸಂಸ್ಥೆ ಚುನಾವಣೆ ಪ್ರಚಾರದಲ್ಲಿ ಅನೇಕ ಜನರು ಸೇರುತ್ತಿದ್ದು, ಈ ವೇಳೆ ಚುನಾವಣೆ ಏಕೆ ಘೋಷಣೆ ಮಾಡಬೇಕಾಗಿತ್ತು” ಎಂದು ಪ್ರಶ್ನಿಸಿದ್ದಾರೆ.
ಇನ್ನು “ಸಾರಿಗೆ ನೌಕರರ ವಿಚಾರದಲ್ಲಿ ರಾಜ್ಯ ಸರ್ಕಾರ ಬಿಗಿ ಧೋರಣೆ ಅನುಸರಿಸುವುದು ಸರಿಯಲ್ಲ, ಮುಖ್ಯಮಂತ್ರಿ ಯಡಿಯೂರಪ್ಪರವರು ನೌಕರರ ಸಮಸ್ಯೆ ಬಗೆಹರಿಸಲು ಸಾಧ್ಯವಾಗದಿದ್ದರೆ ಅವರೊಂದಿಗೆ ಗೌರವಯುತವಾಗಿ ಚರ್ಚಿಸಿ ಕಾಲಾವಕಾಶ ಕೇಳಬೇಕು. ಮುಖ್ಯಮಂತ್ರಿಗಳು ಸಾರಿಗೆ ನೌಕರರೊಂದಿಗೆ ಚರ್ಚಿಸುವ ಸೌಜನ್ಯವನ್ನು ತೋರದೆ ಕಾನೂನಿನ ಮೂಲಕ ಹೆದರಿಸುತ್ತೇವೆ ಎನ್ನುವುದು ಸರಿಯಲ್ಲ” ಎಂದಿದ್ದಾರೆ.
ಮಂಗಳೂರು: ಮೀನುಗಾರಿಕಾ ಬೋಟ್ ಅಪಘಾತ – 2 ಮೀನುಗಾರ ಮೃತ್ಯು, 12 ಮಂದಿ ನಾಪತ್ತೆ -Vishwanews24
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…