ಉಡುಪಿ: ಜೂನ್ 14ರ ನಂತರ ರಾಜ್ಯದಲ್ಲಿ ಅನ್ ಲಾಕ್ ಪ್ರಕ್ರಿಯೆಗಳು ಆರಂಭವಾಗುತ್ತದೆ. ಜನಜಂಗುಳಿ ಆಗುವ ಕಾರಣ ದೇಗುಲಗಳು ತಕ್ಷಣ ತೆರೆಯಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಕೊಟ್ಟು ದೇವರ ದರ್ಶನ ಮಾಡಿ ಬಳಿಕ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದರು. ಕೆಲವೇ ದಿನಗಳಲ್ಲಿ ಲಾಕ್ ಡೌನ್ ತೆರವಾಗುತ್ತದೆ ಎಂದರು.
ಶೇಕಡಾ ಐದಕ್ಕಿಂತ ಕಡಿಮೆ ಪಾಸಿಟಿವಿಟಿ ಇದ್ರೆ ಬೇಗ ಅನ್ಲಾಕ್ ಆಗುತ್ತದೆ. ಏಕಾಏಕಿ ದೇವಸ್ಥಾನಗಳು ತೆರೆದರೆ ಸಮಸ್ಯೆ ಆಗುತ್ತದೆ. ಜನಜಂಗುಳಿ ಜಾಸ್ತಿಯಾಗುವ ಸಾಧ್ಯತೆಯಿದೆ. ಸ್ವಲ್ಪ ದಿನ ಬಿಟ್ಟು ದೇವಾಲಯ ತೆರೆಯುವ ಬಗ್ಗೆ ಚಿಂತನೆ ಇದೆ. ಆದಷ್ಟು ಬೇಗ ದೇವಸ್ಥಾನ ತೆರೆಯಲು ಕ್ರಮ ಕೈಗೊಳ್ಳಲಾಗುವುದು. ಯಾವತ್ತು ಮತ್ತು ಯಾವ ರೀತಿ ದೇವಸ್ಥಾನ ತೆರೆಯಬೇಕು ಎಂಬ ಬಗ್ಗೆ ಶೀಘ್ರ ನಿರ್ಧಾರ ಮಾಡುತ್ತೇವೆ ಎಂದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…