ರಾಜ್ಯ ಪ್ರವಾಸದಲ್ಲಿ ಪ್ರಧಾನಿ – ಜ.19ರಂದು ಯಾದಗಿರಿ, ಕಲಬುರಗಿಗೆ ಆಗಮನ – Vishwanews24
ರಾಜ್ಯ ಪ್ರವಾಸದಲ್ಲಿ ಪ್ರಧಾನಿ – ಜ.19ರಂದು ಯಾದಗಿರಿ, ಕಲಬುರಗಿಗೆ ಆಗಮನ
ಯಾದಗಿರಿ: ಜನವರಿ 19ರಂದು ಪ್ರಧಾನಿ ನರೇಂದ್ರ ಮೋದಿಯವರು ಯಾದಗಿರಿ ಮತ್ತು ಕಲಬುರಗಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವೇಳಾಪಟ್ಟಿ ಇಲ್ಲಿದೆ.
ಪ್ರಧಾನಿ ನರೇಂದ್ರ ಮೋದಿ ಜ.19 ಬೆಳಗ್ಗೆ 11ಕ್ಕೆ ನವದೆಹಲಿಯಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ.
ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದ ಹೆಲಿಪ್ಯಾಡ್ಗೆ ತೆರಳಲಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ಕೊಡೆಕಲ್ ಗ್ರಾಮದಲ್ಲಿ ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ಮತ್ತು ನಾರಾಯಣಪುರ ಎಡದಂಡೆ ಕಾಲುವೆಯ ಆಧುನೀಕರಣ, ಸೂರತ್-ಚೆನ್ನೈ ಎಕ್ಸ್ಪ್ರೆಸ್ ವೇ ಪ್ಯಾಕೇಜ್-3 ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಇನ್ನು ಕೊಡೆಕಲ್ ಗ್ರಾಮದಿಂದ ಮಧ್ಯಾಹ್ನ 01.05ಕ್ಕೆ ನಿರ್ಗಮಿಸಿ, 01.10 ಕ್ಕೆ ಕೊಡೆಕಲ್ ಹೆಲಿಪ್ಯಾಡ್ನಿಂದ ಹೆಲಿಕಾಪ್ಟರ್ ಮೂಲಕ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಹೆಲಿಪ್ಯಾಡ್ನಲ್ಲಿ ಮಧ್ಯಾಹ್ನ 2 ಗಂಟೆಗೆ ಬರಲಿದ್ದಾರೆ. ಮಳಖೇಡನಲ್ಲಿ ಮಧ್ಯಾಹ್ನ 02.15ಕ್ಕೆ ನಡೆಯುವ ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಿ, ನೂತನವಾಗಿ ರಚಿಸಲಾಗಿರುವ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮಳಖೇಡ ಕಾರ್ಯಕ್ರಮ ಸ್ಥಳದಿಂದ ನಿರ್ಗಮಿಸಿ, 03.05ಕ್ಕೆ ಹೆಲಿಕಾಪ್ಟರ್ ಮೂಲಕ ಕಲಬುರಗಿ ಏರ್ಪೋರ್ಟ್ಗೆ ಹೋಗುತ್ತಾರೆ. ಅಲ್ಲಿಂದ 03.35ಕ್ಕೆ ಕಲಬುರಗಿ ಏರ್ಪೋರ್ಟ್ನಿಂದ ದೆಹಲಿಗೆ ವಾಪಾಸ್ ಆಗಲಿದ್ದಾರೆ.
Join our Whatsapp group by clicking the below link 👇👇
