Featured

ರಾಜ್ಯ ಬಜೆಟ್‌ನಲ್ಲಿ ರೂಪಾಯಿ ಚಿಹ್ನೆ ಬದಲಾಯಿಸಿದ ತಮಿಳುನಾಡು ಸರ್ಕಾರ – vishwanews24

ರಾಜ್ಯ ಬಜೆಟ್‌ನಲ್ಲಿ ರೂಪಾಯಿಯ ಅಧಿಕೃತ ಚಿಹ್ನೆ ‘₹’ ಕೈ ಬಿಟ್ಟ ತಮಿಳುನಾಡು ಸರ್ಕಾರ

ಚೆನ್ನೈ : ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ 2025-26 ರ ರಾಜ್ಯ ಬಜೆಟ್‌‌ನಲ್ಲಿ ರೂಪಾಯಿಯ ಅಧಿಕೃತ ಚಿಹ್ನೆ ‘₹’ ಕೈ ಬಿಟ್ಟಿದ್ದು ಬದಲಿಗೆ ‘ರುಬಾಯಿ’ (ತಮಿಳಿನಲ್ಲಿ ರೂಪಾಯಿ) ಯಿಂದ ‘ರು’ ಅನ್ನು ಆಯ್ಕೆ ಮಾಡಿಕೊಂಡು ಹೊಸ ಚರ್ಚೆಗೆ ವೇದಿಕೆಯಾಗಿದೆ.

ನಾಳೆ ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಾಗುವ ರಾಜ್ಯ ಬಜೆಟ್‌ನ ಲೋಗೋವನ್ನು ಅನ್ನು ಸ್ಟಾಲಿನ್ ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದು, ಸಮಾಜದ ಎಲ್ಲಾ ವರ್ಗಗಳಿಗೆ ಅನುಕೂಲವಾಗುವ, ತಮಿಳುನಾಡಿನ ವ್ಯಾಪಕ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುವ ಬಜೆಟ್ ಎಂದು ಬರೆದುಕೊಂಡಿದ್ದಾರೆ.

ಹಿಂದಿನ ಎರಡು ಬಜೆಟ್‌ಗಳಲ್ಲಿ, ರಾಜ್ಯವು ತನ್ನ ಲೋಗೋಗಳಿಗಾಗಿ ರೂಪಾಯಿ ಚಿಹ್ನೆಯನ್ನು ಬಳಸಿತ್ತು. 2023-24ರ ಬಜೆಟ್‌ನಲ್ಲಿಯೂ ಸಹ ಈ ಚಿಹ್ನೆಯನ್ನು ಪ್ರಮುಖವಾಗಿ ತೋರಿಸಲಾಗಿತ್ತು, ಇದನ್ನು ಐಐಟಿ-ಗುವಾಹಟಿಯ ಪ್ರಾಧ್ಯಾಪಕರೊಬ್ಬರು ವಿನ್ಯಾಸಗೊಳಿಸಿದ್ದರು. ‘₹’ ಯಲ್ಲಿ ಹಿಂದಿಯ ‘ರಾ’ ಹೋಲಿಕೆ ಇರುವ ಹಿನ್ನೆಲೆಯಲ್ಲಿ ಬಳಸದಿರಲು ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ಕರೆನ್ಸಿ ಚಿಹ್ನೆಯನ್ನು ರಾಜ್ಯವೊಂದು ತಿರಸ್ಕರಿಸಿರುವುದು ಇದೇ ಮೊದಲು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ತ್ರಿಭಾಷಾ ಒತ್ತಾಯದ ಮೂಲಕ ‘ಹಿಂದಿ ಹೇರಿಕೆ’ ಕುರಿತು ಬಿಜೆಪಿ ನೇತೃತ್ವದ ಕೇಂದ್ರದೊಂದಿಗೆ ಆಡಳಿತಾರೂಢ ಡಿಎಂಕೆ ಹೋರಾಟದ ಮಧ್ಯೆ ಕರೆನ್ಸಿ ಚಿಹ್ನೆಯನ್ನು ಬದಲಾಯಿಸುವ ನಿರ್ಧಾರ ಬಂದಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago