Featured

ರಾಜ್ಯ ಬಜೆಟ್ :ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಬೊಮ್ಮಾಯಿ ಉದಾರ ಹೃದಯ ತೋರಿದ್ದಾರೆ : ಸುನಿಲ್ ಕುಮಾರ್  – Vishwanews24

ರಾಜ್ಯ ಬಜೆಟ್ :ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಬೊಮ್ಮಾಯಿ ಉದಾರ ಹೃದಯ ತೋರಿದ್ದಾರೆ : ಸುನಿಲ್ ಕುಮಾರ್

ಬೆಂಗಳೂರು : ಕೋವಿಡ್ ನಂತರದ ದಿನಗಳಲ್ಲಿ ರಾಜ್ಯದ ಹಣಕಾಸು ವ್ಯವಸ್ಥೆಯನ್ನು ಸುಸ್ಥಿತಿಯಲ್ಲಿ ಹಿಡಿದಿಡುವ ಮೂಲಕ ಸುಮಾರು 402ಕೋಟಿ ರೂ. ರಾಜಸ್ವ ಹೆಚ್ಚಳದ ಬಜೆಟ್ ಮಂಡನೆ ಮಾಡುವ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಆಯವ್ಯಯ ಮಂಡಿಸಿದ್ದಾರೆ ಎಂದು ಇಂಧನ ಹಾಗೂ ಕನ್ನಡ ಸಂಸ್ಕ್ರತಿ ಸಚಿವ ವಿ ಸುನಿಲ್ ಕುಮಾರ್ ಹೇಳಿದ್ದಾರೆ.

ರಾಜಸ್ವ ವೆಚ್ಚ, ಬಂಡವಾಳ ವೆಚ್ಚ ಹಾಗೂ ಸಾಲ ಮರುಪಾವತಿ ಸೇರಿದಂತೆ ೩, ೦೯, ೧೮೨ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದಾರೆ. ವಿತ್ತೀಯ ಹೊಣೆಗಾರಿಕೆ ಮಿತಿಯಲ್ಲೇ ರಾಜ ಸ್ವ ಹೆಚ್ಚಳದ ಬಜೆಟ್ ಮಂಡನೆ ಮೂಲಕ ಬೊಮ್ಮಾಯಿ ಸೈ ಎನಿಸಿಕೊಂಡಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ರೈತ ಸಮುದಾಯಕ್ಕೆ ಈ ಬಾರಿಯ ಬಜೆಟ್ ನಲ್ಲಿ ವಿಶೇಷ ಕೊಡುಗೆ ನೀಡಲಾಗಿದೆ. ಸಹಕಾರ ಬ್ಯಾಂಕ್ ಗಳ ಮೂಲಕ ನೀಡಲಾಗುತ್ತಿದ್ದ ಶೂನ್ಯ ಬಡ್ಡಿ ಸಾಲ ಪ್ರಮಾಣವನ್ನು 3ರಿಂದ 5 ಲಕ್ಷ ರೂಗೆ ಹೆಚ್ಚಳಮಾಡಲಾಗಿದೆ. 30 ಲಕ್ಷ ರೈತರಿಗೆ ಇದರಿಂದ ಅನುಕೂಲವಾಗಲಿದೆ. 56 ಲಕ್ಷ ಸಣ್ಣ ಹಾಗೂ ಅತಿಸಣ್ಣ ರೈತ ಕುಟುಂಬಗಳಿಗೆ ವಿಮಾ ಯೋಜನೆ ಕಲ್ಪಿಸಿರುವುದು ಶ್ಲಾಘನೀಯ.

ಸ್ತ್ರೀಯರ ಸಬಲೀಕರಣಕ್ಕಾಗಿ ಒಂದು ಲಕ್ಷ ಮಹಿಳೆಯರಿಗೆ ಕೌಶಲ್ಯ ತರಬೇತಿ, ಮಹಿಳಾ ಕಾರ್ಮಿಕರಿಗೆ 500ರೂ. ಸಹಾಯ ಧನ, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಸಣ್ಣ ಮತ್ತು ಅತಿ ಸಣ್ಣ ಕುಟುಂಬಗಳಿಗೆ ಜೀವನ್ ಜ್ಯೋತಿ ವಿಮಾ ಯೋಜನೆ, ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಸೇರಿದಂತೆ ಜನ ಸಾಮಾನ್ಯರಿಗೆ ಹೊರೆಯಾಗದಂತೆ ಮುಖ್ಯಮಂತ್ರಿಗಳು ಯೋಜನೆ ರೂಪಿಸಿದ್ದಾರೆ.

ಇಂಧನ ಕ್ಷೇತ್ರದ ಸುಧಾರಣೆಗಾಗಿ ಗುರುಚರಣ್ ಸಮಿತಿ ವರದಿ ಅನುಷ್ಢಾನದ ಬಗ್ಗೆ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ಇಂಧನ ಕಂಪನಿಗಳಿಗೆವ 12,743 ಕೋಟಿ ರೂ.ಅನುದಾನ ನೀಡುವ ಭರವಸೆ ನೀಡಲಾಗಿರುವುದು ಶ್ಲಾಘನೀಯ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಬೊಮ್ಮಾಯಿ ಉದಾರ ಹೃದಯ ತೋರಿದ್ದಾರೆ ಎಂದು ಬಣ್ಣಿಸಿದ್ದಾರೆ.

ಮೀನುಗಾರರಿಗೆ ವಸತಿ ಸೌಲಭ್ಯ ಕಲ್ಪಿಸಲು ನಮ್ಮ ಸರ್ಕಾರ ಆದ್ಯತೆ ನೀಡಿದ್ದು, ಪ್ರಸಕ್ತ ಸಾಲಿನಲ್ಲಿ ಹತ್ತು ಸಾವಿರ ವಸತಿ ರಹಿತ ಮೀನುಗಾರರಿಗೆ ಸೂರು ಕಲ್ಪಿಸಲಾಗುತ್ತದೆ. ಮೀನುಗಾರಿಕಾ ದೋಣಿಗಳಿಗೆ ೨ ಲಕ್ಷ ಕಿ ಲೀಟರ್ ಡೀಸೆಲ್ ನೀಡಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಸರ್ಕಾರ 250 ಕೋಟಿ ರೂ. ವಿನಿಯೋಗಿಸಲಿದೆ. ಸೀಗಡಿ ರಫ್ತು ಪ್ರೋತ್ಸಾಹಿಸಲು ಸೀಗಡಿ ಕೃಷಿ ಕ್ಕಸ್ಟರ್ ಸ್ಥಾಪನೆಗೆ ಮುಂದಾಗಿರುವುದು ಸ್ವಾಗತಾರ್ಹ.

ಪಶ್ಚಿಮವಾಹಿನಿ ಎರಡನೇ ಹಂತದಲ್ಲಿ 378 ಕೋಟಿ ರೂ. ಮೊತ್ತದ ಕಾಮಗಾರಿ ಅನುಷ್ಠಾನಕ್ಕೆ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ಆಳಸಮುದ್ರ ಮೀನುಗಾರಿಕೆಯನ್ನು ಉತ್ತೇಜಿಸಲು 100 ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗೆ ಮತ್ಸ್ಯ ಸಿರಿ ಯೋಜನೆ ಸಂಯೋಜನೆ ಮಾಡಲು ಮುಂದಾಗಿರುವ ಮೂಲಕ ಮತ್ಸ್ಯೋದ್ಯಮಕ್ಕೆ ಆದ್ಯತೆ ನೀಡಲಾಗಿದೆ. ಒಟ್ಟಾರೆಯಾಗಿ ಇದು ಎಲ್ಲರನ್ನು ಒಳಗೊಳ್ಳುವ ಅಮೃತ ಕಾಲದ ಬಜೆಟ್ ಎಂದು ಬಣ್ಣಿಸಿದ್ದಾರೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

14 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

14 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

16 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

16 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

16 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

17 hours ago