ಉಡುಪಿ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಕರಾವಳಿ ಭಾಗದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುತ್ತಿರುವ ಮೀನುಗಾರಿಕೆ ಅಭಿವೃದ್ಧಿಗೆ ಈ ಬಾರಿಯ ಬಜೆಟ್ ನಲ್ಲಿ ಯಾವುದೇ ಅನುದಾನ, ಯೋಜನೆಗಳನ್ನು ಘೋಷಣೆ ಮಾಡದೇ ತನ್ನ ದಿವ್ಯ ನಿರ್ಲಕ್ಷ್ಯವನ್ನು ಮುಂದುವರೆಸಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.
ಈ ಬಾರಿಯ ಬಜೆಟ್ ನಲ್ಲಿ ಕರಾವಳಿ ಭಾಗದ ಮೀನುಗಾರಿಕಾ ಬಂದರಿನ ಅಭಿವೃದ್ಧಿ ಕಾಮಗಾರಿಗಳಿಗೆ ಯಾವುದೇ ಅನುದಾನ ಮಂಜೂರು ಮಾಡಿಲ್ಲ, ಮೀನುಗಾರಿಕೆ ಮೂಲಕ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಲಕ್ಷಾಂತರ ಮಂದಿಗೆ ಉದ್ಯೋಗ ಕಲ್ಪಿಸಿ ಮೀನುಗಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮೀನುಗಾರರ ಬೇಡಿಕೆಯಾದ ಡೀಸೆಲ್ ಸಬ್ಸಿಡಿ ಮಿತಿ ಹೆಚ್ಚಳ, ಮೀನುಗಾರಿಕೆ ಸಂಬಂಧಿತ ಕೈಗಾರಿಕೆಗಳಿಗೆ ಪ್ರೋತ್ಸಾಹ, ಬಂದರುಗಳ ಹೂಳು ತೆರವು, ಮೀನುಗಾರಿಕಾ ಚಟುವಟಿಕೆಗೆ ಶೂನ್ಯ ಬಡ್ಡಿದರದ ಸಾಲ ಯೋಜನೆ, ಮಹಿಳಾ ಮೀನುಗಾರರ ಸಾಲ ಮನ್ನಾ, ಕಡಲ್ಕೊರೆತ ಶಾಶ್ವತ ಪರಿಹಾರ,.ಮೀನುಗಾರಿಕೆ ರಸ್ತೆಗಳ ಅಭಿವೃದ್ಧಿ, ಮತ್ಯಾಶ್ರಯ ವಸತಿ ಯೋಜನೆಯ ಸಹಾಯಧನ 5 ಲಕ್ಷಕ್ಕೆ ಹೆಚ್ಚಳದಂತಹ ಯಾವುದೇ ಬೇಡಿಕೆಗಳಿಗೆ ಈ ಬಾರಿಯ ಬಜೆಟ್ ನಲ್ಲಿ ಕ್ರಮ ವಹಿಸಿಲ್ಲ.
ಇದನ್ನೂ ಓದಿ:
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಹಾಗೂ ಸಾಗರಮಾಲಾ ಯೋಜನೆ ಮೂಲಕ ರಾಜ್ಯದ ಮೀನುಗಾರಿಕಾ ಬಂದರು ಹಾಗೂ ಮೀನುಗಾರಿಕೆಯ ಸಮಗ್ರ ಅಭಿವೃದ್ಧಿಗೆ ವಿಪುಲ ಅವಕಾಶಗಳಿದ್ದರೂ ರಾಜ್ಯ ಸರ್ಕಾರ ಪೂರಕ ಸ್ಪಂದನೆ ನೀಡದೆ ಮೀನುಗಾರರ ಬಗ್ಗೆ ಅಸಡ್ಡೆ ಮುಂದುವರೆಸಿದೆ.
ಈ ಬಗ್ಗೆ ಮೀನುಗಾರರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಜಿಲ್ಲೆಯ ಕಾಂಗ್ರೆಸ್ ಮುಖಂಡರು ತುಟಿ ಬಿಚ್ಚುತ್ತಿಲ್ಲ, ಮಲ್ಪೆ ಬಂದರಿನಲ್ಲಿ ಮೀನುಗಾರರು ಹಗಲಿರುಳು ಶ್ರಮಿಸಿ ತಂದ ಮೀನುಗಳನ್ನು ಕದ್ದ ಕಳ್ಳರ ಪರವಾಗಿ ಪ್ರತಿಭಟನೆ ನಡೆಸುವ ಸಂಘಟನೆಯ ಮುಖಂಡರು ಯಾವುದೇ ಚಕಾರ ಎತ್ತುತ್ತಿಲ್ಲ.
ಕರಾವಳಿ ಮೀನುಗಾರರ ಬೇಡಿಕೆಯನ್ನು ಕಡೆಗಣಿಸಿ ತಾಳ್ಮೆ ಪರೀಕ್ಷಿಸುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಇದನ್ನೂ ಓದಿ:
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…