ರಾಜ್ಯ ಬಜೆಟ್ 2020 : ಕರಾವಳಿ ಜಿಲ್ಲೆಗಳಿಗೆ ಯಾವೆಲ್ಲಾ ಯೋಜನೆಗಳನ್ನು ಘೋಷಿಸಲಾಗಿದೆ ಎನ್ನುವ ಸಂಕ್ಷಿಪ್ತ ಅಂಶಗಳು ಇಲ್ಲಿವೆ -Vishwanews24

ಮಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವಿಧಾನ ಸಭೆಯಲ್ಲಿ ಮಂಡಿಸಿರುವ ಬಜೆಟ್ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯಾವೆಲ್ಲಾ ಯೋಜನೆಗಳನ್ನು ಘೋಷಿಸಲಾಗಿದೆ ಎನ್ನುವ ಸಂಕ್ಷಿಪ್ತ ಅಂಶಗಳು ಇಲ್ಲಿವೆ.

1. ಕರಾವಳಿ ಪ್ರದೇಶದಲ್ಲಿ ಪಶ್ಚಿಮ ಘಟ್ಟದ ನದಿಗಳಿಗೆ ಅಡ್ಡಲಾಗಿ ‘ಕಿಂಡಿ ಅಣೆಕಟ್ಟು ಯೋಜನೆ’ಗಳ ವ್ಯಾಪಕ ಅನುಷ್ಠಾನಕ್ಕೆ ಮಾಸ್ಟರ್ ಪ್ಲಾನ್.
2. “ಮಹಿಳಾ ಮೀನುಗಾರರ ಸಬಲೀಕರಣ” ಯೋಜನೆಯಡಿ 1000 ಮೀನುಗಾರ ಮಹಿಳೆಯರಿಗೆ ದ್ವಿಚಕ್ರ ವಾಹನಗಳನ್ನು ನೀಡಲು ಐದು ಕೋಟಿ ರೂ. ಅನುದಾನ.
3. ಮಂಗಳೂರು ತಾಲ್ಲೂಕು ಕುಳಾಯಿಯಲ್ಲಿ ನಿರ್ಮಿಸಲಾಗುತ್ತಿರುವ ಹೊಸ ಮೀನುಗಾರಿಕೆ ಬಂದರಿನಲ್ಲಿ 12.5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಕರಾವಳಿ ಮೀನು ರಫ್ತು ಸ್ಥಾವರ ಸ್ಥಾಪನೆ.
4. ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಜವುಳಿ ಪಾರ್ಕ್.
5. ಉಡುಪಿಯ ಅಂಗಾರು ಕಟ್ಟೆ ಬಂದರು ಅಭಿವೃದ್ಧಿಗೆ 130 ಕೋಟಿ ರೂ. ಅನುದಾನ.
6. ಉಡುಪಿ ಜಿಲ್ಲೆಯ ಹೆಜಮಾಡಿಕೋಡಿಯಲ್ಲ್ಲಿ ಪರಿಷ್ಕೃತ ಅಂದಾಜು ವೆಚ್ಚ 181 ಕೋಟಿ ರೂ.ಗಳಲ್ಲಿ ಮೀನುಗಾರಿಕೆ ಬಂದರು ನಿರ್ಮಾಣ.
7. ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ ಮರವಂತೆಯ ಹೊರ ಬಂದರಿನ ಎರಡನೇ ಹಂತದ ಕಾಮಗಾರಿ ಪೂರ್ಣಗೊಳಿಸಲು 85 ಕೋಟಿ ರೂ. ಅನುದಾನ
8.. ಉಡುಪಿಯಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರಗಳಿಗೆ ನಾಲ್ಕು ಕೋಟಿ ರೂ. ಅನುದಾನ(ಹೊರ ಜಿಲ್ಲೆಯೂ ಸೇರಿದೆ)
9. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ ಎರಡು ಕೋಟಿ ರೂ. ವೆಚ್ಚದಲ್ಲಿ ಹಿನ್ನೀರು ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆ.
10. ಆಧುನಿಕ ಮೀನುಗಾರಿಕೆ ತಾಂತ್ರಿಕತೆ ಅಳವಡಿಕೆಯ ಉತ್ತೇಜನಕ್ಕೆ 1.5 ಕೋಟಿ ರೂ. ವೆಚ್ಚದಲ್ಲಿ “ಕರ್ನಾಟಕ ಮತ್ಸ್ಯ ವಿಕಾಸ ಯೋಜನೆ’ ಜಾರಿ.
ಇದರಲ್ಲಿ ಪಶ್ಚಿಮ ವಾಹಿನಿ ಯೋಜನೆ, ವಿವಿಧ ಮೀನುಗಾರಿಕಾ ಬಂದರು ಅಭಿವೃದ್ಧಿ, ಅಡಿಕೆ ಬೆಳೆಗಾರರ ಸಾಲಕ್ಕೆ ಬಡ್ಡಿ ವಿನಾಯಿತಿಯಂತಹ ಕಾರ್ಯಕ್ರಮಗಳು ಸೇರಿವೆ.
11. ಅಡಿಕೆ ಬೆಳೆಗಾರರ ಪ್ರಾಥಮಿಕ/ ಮಾರುಕಟ್ಟೆ ಸಹಕಾರ ಸಂಘಗಳಲ್ಲಿ ಪ್ರತಿ ರೈತ ಕುಟುಂಬಕ್ಕೆ ನೀಡುವ ದೀರ್ಘಾವಧಿ ಕೃಷಿ ಸಾಲದ ಪೈಕಿ ಗರಿಷ್ಠ ಎರಡು ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.5 ರಷ್ಟು ಬಡ್ಡಿ ವಿನಾಯಿತಿ.

ಇವುಗಳಲ್ಲಿ ಪ್ರಮುಖವಾಗಿ ಬಂದರು ಅಭಿವೃದ್ದಿ, ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ, ಅಡಿಕೆ ಬೆಳೆಗಾರರ ಸಾಲಕ್ಕೆ ಬಡ್ಡಿ ವಿನಾಯಿತಿ ಪ್ರಮುಖವಾಗಿದೆ.

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

19 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

21 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

21 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

21 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

22 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

22 hours ago