ರಾಜ್ಯ ಬಜೆಟ್ 2020 : ಜಗಜ್ಯೋತಿ ಬಸವೇಶ್ವರ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಿರ್ಮಾಣ -Vishwanews24

ಬೆಂಗಳೂರು: ಜಗಜ್ಯೋತಿ ಬಸವೇಶ್ವರ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ.

ಸಿಎಂ ಬಿ.ಎಸ್‌ ಯಡಿಯೂರಪ್ಪ ಅವರು ತಮ್ಮ ಬಜೆಟ್‌ ಭಾಷಣದಲ್ಲಿ ಈ ನಿರ್ಧಾರ ಘೋಷಿಸಿದ್ದಾರೆ.

ಚಿತ್ರದುರ್ಗದ ಮುರುಘಾ ಮಠದ ಆವರಣದಲ್ಲಿ 325 ಅಡಿ ಎತ್ತರದ ಜಗಜ್ಯೋತಿ ಬಸವೇಶ್ವರರ ಕಂಚಿನ ಪ್ರತಿಮೆ ನಿರ್ಮಾಣವಾಗುತ್ತಿದ್ದು, ಅದಕ್ಕಾಗಿ ಈ ವರ್ಷ ₹20 ಕೋಟಿ ರೂ.ಗಳ ನೆರವು ನೀಡಲಾಗಿದೆ.

ಇದೇ ವೇಳೆ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 100 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ನಿರ್ಮಾಣ ಮಾಡಲು ನಿರ್ಧರಿಸಲಾಗಿದ್ದು, ಅದಕ್ಕಾಗಿ  ₹66 ಕೋಟಿ. ರೂ ಮೀಸಲಿಡಲಾಗಿದೆ ಎಂದು ಸಿಎಂ ತಿಳಿಸಿದರು.

ಬಸವಕಲ್ಯಾಣದಲ್ಲಿ ₹500 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅನುಭವ ಮಂಟಪಕ್ಕೆ ಈ ಬಾರಿ ಬಜೆಟ್‌ನಲ್ಲಿ ₹100 ಕೋಟಿ ಅನುದಾನ ನೀಡಲಾಗಿದೆ.

ಸಂತ ಶಿಶುನಾಳ ಶರೀಫರ ಸಮಾಧಿ ಇರುವ ಹಾವೇರಿಯ ಶಿಶುನಾಳ ಗ್ರಾಮದಲ್ಲಿ ಐದು ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದಾಗಿ ಸಿಎಂ ಘೋಷಿಸಿದ್ಧಾರೆ.

ಮಾಜಿ ಮುಖ್ಯಮಂತ್ರಿ ದಿ. ಎಸ್‌. ನಿಜಲಿಂಗಪ್ಪ ಅವರು ವಾಸವಿದ್ದ ಚಿತ್ರದರ್ಗದ ಮನೆಯನ್ನು ಸಂರಕ್ಷಿಸಲು ಹಾಗೂ ಅಭಿವೃದ್ಧಿಪಡಿಸಲು ಐದು ಕೋಟಿ, ಸಾಹಿತಿ ಎಸ್‌.ಎಲ್‌ ಬೈರಪ್ಪ ಅವರ ಹುಟ್ಟೂರು ಹಾಸನದ ಸಂತೆ ಶಿವಾರ ಗ್ರಾಮದ ಅಭಿವೃದ್ಧಿಗಾಗಿ ಐದು ಕೋಟಿ ನೀಡುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

16 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

18 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

18 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

18 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

19 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

19 hours ago