Featured

ರಾಜ್ಯ ಬಜೆಟ್ 2026 :  ಕುಕ್ಕೆ, ಕೊಲ್ಲೂರು ದೇವಾಲಯಗಳ ಮೂಲಸೌಕರ್ಯ ಅಭಿವೃದ್ದಿಗೆ ಬಜೆಟ್‌ನಲ್ಲಿ ಘೋಷಣೆ – vishwanews24

ರಾಜ್ಯ ಬಜೆಟ್ 2026 :  ಕುಕ್ಕೆ, ಕೊಲ್ಲೂರು ದೇವಾಲಯಗಳ ಮೂಲಸೌಕರ್ಯ ಅಭಿವೃದ್ದಿಗೆ ಬಜೆಟ್‌ನಲ್ಲಿ ಘೋಷಣೆ

ಬೆಂಗಳೂರು: 17ನೇ ಬಜೆಟ್​​​ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರಾವಳಿಗೆ ಹೆಚ್ಚು ಮಹತ್ವ ನೀಡಿದ್ದಾರೆ. ಬಜೆಟ್​​​ ಆರಂಭದಲ್ಲಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ.

ರಾಜ್ಯದ ಅತಿ ಹೆಚ್ಚು ಆದಾಯ ತರುವ ಹಾಗೂ ಲಕ್ಷಾಂತರ ಭಕ್ತರು ಭೇಟಿ ನೀಡುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಗಳ ಮೂಲಸೌಕರ್ಯ ವೃದ್ಧಿಗೆ ಸರ್ಕಾರ ಮುಂದಾಗಿದೆ. ಬಜೆಟ್‌ನಲ್ಲಿ ಘೋಷಿಸಲಾದ ಈ ಪ್ರಾಧಿಕಾರಗಳು ದೇವಾಲಯಗಳ ಆಡಳಿತ ಮತ್ತು ಭಕ್ತರ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲಿವೆ.

ಪ್ರಾಧಿಕಾರ ರಚನೆಯ ಪ್ರಮುಖ ಉದ್ದೇಶಗಳು:
ಸಮಗ್ರ ಅಭಿವೃದ್ಧಿ: ದೇವಾಲಯದ ಸುತ್ತಮುತ್ತಲಿನ ರಸ್ತೆಗಳು, ಕುಡಿಯುವ ನೀರು ಮತ್ತು ನೈರ್ಮಲ್ಯ ವ್ಯವಸ್ಥೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವುದು.

ಇದನ್ನೂ ಓದಿ:

ಭಕ್ತರ ಸೌಲಭ್ಯ: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಭಕ್ತರ ಸಂಖ್ಯೆಗೆ ಅನುಗುಣವಾಗಿ ವಸತಿ ನಿಲಯಗಳು, ಸರತಿ ಸಾಲಿನ ವ್ಯವಸ್ಥೆ ಮತ್ತು ದಾಸೋಹ ಭವನಗಳ ಆಧುನೀಕರಣ.

ಪರಿಸರ ಸಂರಕ್ಷಣೆ: ಕುಕ್ಕೆ ಸುಬ್ರಹ್ಮಣ್ಯವು ಪಶ್ಚಿಮ ಘಟ್ಟದ ಸೂಕ್ಷ್ಮ ಪ್ರದೇಶದಲ್ಲಿದೆ. ಪ್ರಾಧಿಕಾರ ರಚನೆಯಿಂದ ಇಲ್ಲಿನ ಪರಿಸರ ಸಮತೋಲನ ಕಾಪಾಡುತ್ತಾ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಸಾಧ್ಯವಾಗುತ್ತದೆ.

ಆಡಳಿತಾತ್ಮಕ ಪಾರದರ್ಶಕತೆ: ದೇವಾಲಯದ ಆದಾಯವನ್ನು ಸಮರ್ಪಕವಾಗಿ ಆಯಾ ಕ್ಷೇತ್ರಗಳ ಅಭಿವೃದ್ಧಿಗೇ ಬಳಸಲು ಈ ಸ್ವಾಯತ್ತ ಪ್ರಾಧಿಕಾರಗಳು ನೆರವಾಗಲಿವೆ. ಈ ಘೋಷಣೆಯು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಧಾರ್ಮಿಕ ಪ್ರವಾಸೋದ್ಯಮಕ್ಕೆ ದೊಡ್ಡ ಬಲ ನೀಡಲಿದೆ. ಹಂಪಿ ಅಥವಾ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರಗಳ ಮಾದರಿಯಲ್ಲಿಯೇ ಇವು ಕಾರ್ಯನಿರ್ವಹಿಸುವ ಸಾಧ್ಯತೆ ಇದೆ.

ಇದನ್ನೂ ಓದಿ:

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago