ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಬಜೆಟ್ ಅನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಿದರು. ಇದು ಅವರು ಮಂಡಿಸುತ್ತಿರುವ ದಾಖಲೆಯ 17ನೇ ಆಯವ್ಯಯವಾಗಿದ್ದು, ಈ ಬಾರಿಯ ಒಟ್ಟು ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂ.ಗಳಾಗಿದೆ.
ಮೀನುಗಾರರಿಗೆ ಉಚಿತವಾಗಿ ನೀಡುವ ಮೀನುಗಾರಿಕೆ ಸಲಕರಣೆ ಕಿಟ್ ಮೌಲ್ಯದ ದರವನ್ನು 10,000 ರೂ.ಗಳಿಂದ 20,000 ರೂ.ಗಳಿಗೆ ಹೆಚ್ಚಿಸಿ ಮೀನುಗಾರಿಕೆ ಚಟುವಟಿಕೆಗಳನ್ನು ಉತ್ತೇಜಿಸಲಾಗುವುದು.
ಜೈವಿಕ ತಂತ್ರಜ್ಞಾನದ ಉದ್ಯಮಗಳು, ನವೀನ ತಂತ್ರಜ್ಞಾನದ ಅಭಿವೃದ್ಧಿ ಮತ್ತು ಸಮುದ್ರ ಕೃಷಿಯನ್ನು ಪ್ರೋತ್ಸಾಹಿಸಲು ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ Centre of Excellence ಸ್ಥಾಪಿಸಲಾಗುವುದು.
ಇದನ್ನೂ ಓದಿ:
ಮೀನು ಆಹಾರದ ಸೇವನೆಯನ್ನು ಉತ್ತೇಜಿಸುವ ಹಾಗೂ ಸಾರ್ವಜನಿಕರಿಗೆ ಸ್ವಚ್ಛ ಮತ್ತು ಗುಣಮಟ್ಟದ ಮೀನು ಉತ್ಪನ್ನಗಳು ಲಭ್ಯವಾಗುವಂತೆ ಮಾಡಲು ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳನ್ನು ಸ್ಥಾಪಿಸಲಾಗುವುದು.
ಮೀನು ಮಾರಾಟ ಮಾಡಲು ಸುಸಜ್ಜಿತ ಮೀನು ಮಾರುಕಟ್ಟೆಗಳ ಅವಶ್ಯಕತೆ ಇರುವುದರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆಯನ್ನು ನಿರ್ಮಿಸಲಾಗುವುದು.
ರಾಜ್ಯದಲ್ಲಿ ಮೀನುಗಾರಿಕೆ ಕೊಂಡಿ ರಸ್ತೆಗಳ ನಿರ್ವಹಣೆಗಾಗಿ 20 ಕೋಟಿ ರೂ.ಗಳನ್ನು ಒದಗಿಸಲಾಗುವುದು.
ಒಳನಾಡು ಮೀನುಗಾರಿಕೆಯು ಗ್ರಾಮೀಣ ಜೀವನೋಪಾಯ ಮತ್ತು ಆಹಾರ ಭದ್ರತೆಗೆ ಮಹತ್ವವಾಗಿದೆ. ಮೀನುಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ನದಿ, ಕೆರೆ, ಕೃಷಿ ಹೊಂಡ ಹಾಗೂ ಜಲಾಶಯಗಳಲ್ಲಿ ಮೀನು ಉತ್ಪಾದನೆ ಹೆಚ್ಚಿಸಲು ಮೀನುಗಾರರಿಗೆ ತರಬೇತಿ ನೀಡಿ ಸ್ಥಿರ ಆದಾಯ ಗಳಿಕೆಗೆ ಅವಕಾಶ ಕಲ್ಪಿಸಲಾಗುವುದು.
ಇದನ್ನೂ ಓದಿ:
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…