Featured

ರಾಜ್ಯ ಬಜೆಟ್ 2026: ಮೀನುಗಾರಿಕೆ ಸಲಕರಣೆ ಕಿಟ್ ಮೌಲ್ಯದ ದರ ಹೆಚ್ಚಳ  – vishwanews24

ರಾಜ್ಯ ಬಜೆಟ್ 2026: ಮೀನುಗಾರಿಕೆ ಸಲಕರಣೆ ಕಿಟ್ ಮೌಲ್ಯದ ದರ ಹೆಚ್ಚಳ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಬಜೆಟ್‌ ಅನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಿದರು. ಇದು ಅವರು ಮಂಡಿಸುತ್ತಿರುವ ದಾಖಲೆಯ 17ನೇ ಆಯವ್ಯಯವಾಗಿದ್ದು, ಈ ಬಾರಿಯ ಒಟ್ಟು ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂ.ಗಳಾಗಿದೆ.

ಮೀನುಗಾರರಿಗೆ ಉಚಿತವಾಗಿ ನೀಡುವ ಮೀನುಗಾರಿಕೆ ಸಲಕರಣೆ ಕಿಟ್ ಮೌಲ್ಯದ ದರವನ್ನು 10,000 ರೂ.ಗಳಿಂದ 20,000 ರೂ.ಗಳಿಗೆ ಹೆಚ್ಚಿಸಿ ಮೀನುಗಾರಿಕೆ ಚಟುವಟಿಕೆಗಳನ್ನು ಉತ್ತೇಜಿಸಲಾಗುವುದು.

ಜೈವಿಕ ತಂತ್ರಜ್ಞಾನದ ಉದ್ಯಮಗಳು, ನವೀನ ತಂತ್ರಜ್ಞಾನದ ಅಭಿವೃದ್ಧಿ ಮತ್ತು ಸಮುದ್ರ ಕೃಷಿಯನ್ನು ಪ್ರೋತ್ಸಾಹಿಸಲು ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ Centre of Excellence ಸ್ಥಾಪಿಸಲಾಗುವುದು.

ಇದನ್ನೂ ಓದಿ:

ಮೀನು ಆಹಾರದ ಸೇವನೆಯನ್ನು ಉತ್ತೇಜಿಸುವ ಹಾಗೂ ಸಾರ್ವಜನಿಕರಿಗೆ ಸ್ವಚ್ಛ ಮತ್ತು ಗುಣಮಟ್ಟದ ಮೀನು ಉತ್ಪನ್ನಗಳು ಲಭ್ಯವಾಗುವಂತೆ ಮಾಡಲು ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳನ್ನು ಸ್ಥಾಪಿಸಲಾಗುವುದು.

ಮೀನು ಮಾರಾಟ ಮಾಡಲು ಸುಸಜ್ಜಿತ ಮೀನು ಮಾರುಕಟ್ಟೆಗಳ ಅವಶ್ಯಕತೆ ಇರುವುದರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆಯನ್ನು ನಿರ್ಮಿಸಲಾಗುವುದು.

ರಾಜ್ಯದಲ್ಲಿ ಮೀನುಗಾರಿಕೆ ಕೊಂಡಿ ರಸ್ತೆಗಳ ನಿರ್ವಹಣೆಗಾಗಿ 20 ಕೋಟಿ ರೂ.ಗಳನ್ನು ಒದಗಿಸಲಾಗುವುದು.

ಒಳನಾಡು ಮೀನುಗಾರಿಕೆಯು ಗ್ರಾಮೀಣ ಜೀವನೋಪಾಯ ಮತ್ತು ಆಹಾರ ಭದ್ರತೆಗೆ ಮಹತ್ವವಾಗಿದೆ. ಮೀನುಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ನದಿ, ಕೆರೆ, ಕೃಷಿ ಹೊಂಡ ಹಾಗೂ ಜಲಾಶಯಗಳಲ್ಲಿ ಮೀನು ಉತ್ಪಾದನೆ ಹೆಚ್ಚಿಸಲು ಮೀನುಗಾರರಿಗೆ ತರಬೇತಿ ನೀಡಿ ಸ್ಥಿರ ಆದಾಯ ಗಳಿಕೆಗೆ ಅವಕಾಶ ಕಲ್ಪಿಸಲಾಗುವುದು.

ಇದನ್ನೂ ಓದಿ:

 

 

 

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

4 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

4 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

4 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

4 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

4 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

4 days ago