Featured

ರಾಜ್ಯ ಬಜೆಟ್‌ 2026: 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬಳಕೆ ನಿಷೇಧ: ಸಿಎಂ ಘೋಷಣೆ – vishwanews24

ರಾಜ್ಯ ಬಜೆಟ್‌ 2026: 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬಳಕೆ ನಿಷೇಧ: ಸಿಎಂ ಘೋಷಣೆ

ಬೆಂಗಳೂರು :ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

2026-27ನೇ ಸಾಲಿನ ಬಜೆಟ್‌ ಮಂಡನೆ ವೇಳೆ ಮಾತನಾಡಿದ ಅವರು, ಹೆಚ್ಚುತ್ತಿರುವ ಮೊಬೈಲ್‌ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:

ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು, ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು ಎಂದರು.

1 ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು. ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪಿಯು ಕಾಲೇಜುಗಳಲ್ಲಿ ಹೊಸ ಕೊಠಡಿ ನಿರ್ಮಾಣ ಮತ್ತು ಕೊಠಡಿಗಳ ದುರಸ್ತಿ ಕಾಮಗಾರಿಗಳಿಗೆ 565 ಕೋಟಿ ರೂ., ಶೌಚಾಲಯ ನಿರ್ಮಾಣಕ್ಕಾಗಿ 75 ಕೋಟಿ ರೂ. ಹಾಗೂ ಶಾಲೆಗಳಿಗೆ ಪೀಠೋಪಕರಣಗಳನ್ನು ಖರೀದಿಸಲು 25 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:

2026-27ನೇ ಸಾಲಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.
ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 BRC ಕೇಂದ್ರಗಳಲ್ಲಿ ಪ್ರತಿ ಕೇಂದ್ರಕ್ಕೆ ಒಬ್ಬರು ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರನ್ನು ನೇಮಿಸಲಾಗುವುದು ಎಂದು ತಿಳಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago