ರಾಜ್ಯ ಬಜೆಟ್ : `PUC’ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 1,000 ರೂ. ಸ್ಕಾಲರ್ ಶಿಪ್ -Vishwanews24
ಬೆಂಗಳೂರು : ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು 2020-21 ಸಾಲಿನ ಪರಿಷ್ಕೃತ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಈ ವೇಳೆ ಮಕ್ಕಳಿಗಾಗಿಯೇ ವಿಶೇಷ ಬಜೆಟ್ ಮಂಡಿಸಿರುವ ಸಿಎಂ, ಪಿಯುಸಿ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ.
ಪದವಿ ಪೂರ್ವ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 1,000 ರೂ. ಸ್ಕಾಲರ್ ಶಿಪ್ ನೀಡಲಿದೆ. ವಿದ್ಯಾರ್ಥಿಗಳು ಎರಡು ವರ್ಷದ ಅವಧಿಗೆ ಈ ಯೋಜನೆಯ ಲಾಭ ಪಡೆಯಲಿದ್ದಾರೆ.
ಆಟೋ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಲಾಗಿ ಪ್ರತಿ ವರ್ಷ ಪ್ರತಿ ಕುಟುಂಬಕ್ಕೆ 2000 ರೂಗಳ ನೆರವು, ಈ ಉದ್ದೇಶಕ್ಕಾಗಿ 2020-21ನೇ ಸಾಲಿಗೆ 40 ಕೋಟಿ ಒದಗಿಸಲಾಗುವುದು ಎಂದು ತಿಳಿಸಿದರು.
