Featured

ರಾಜ್ಯ ಬಿಜೆಪಿಯಿಂದ ನಾಳೆಯಿಂದ ಮೂರು ದಿನ ಗ್ರಾಮ ಚಲೋ ಅಭಿಯಾನ : ಬಿ.ವೈ. ವಿಜಯೇಂದ್ರ – Vishwanews24

ರಾಜ್ಯ ಬಿಜೆಪಿಯಿಂದ ನಾಳೆಯಿಂದ ಮೂರು ದಿನ ಗ್ರಾಮ ಚಲೋ ಅಭಿಯಾನ : ಬಿ.ವೈ. ವಿಜಯೇಂದ್ರ

ಬೆಂಗಳೂರು: ರಾಜ್ಯ ಬಿಜೆಪಿಯಿಂದ ನಾಳೆಯಿಂದ ಮೂರು ದಿನ ಗ್ರಾಮ ಚಲೋ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಹೆಚ್. ಗೊಲ್ಲಹಳ್ಳಿ ಗ್ರಾಮದಲ್ಲಿ ‘ಗ್ರಾಮ ಚಲೋ’ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾಜೀ ಮತ್ತು ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರ ಅಪೇಕ್ಷೆಯಂತೆ ‘ಗ್ರಾಮ ಚಲೋ’ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ. ರಾಜ್ಯದಲ್ಲಿ 28 ಸಾವಿರಕ್ಕೂ ಹೆಚ್ಚು ಹಳ್ಳಿಗಳು, 19 ಸಾವಿರ ನಗರ ಬೂತ್‍ಗಳಲ್ಲಿ ಒಟ್ಟಾರೆಯಾಗಿ 42 ಸಾವಿರ ಕಾರ್ಯಕರ್ತರು ಮೂರು ದಿನಗಳ ಕಾಲ ನಿರಂತರವಾಗಿ ಈ ಅಭಿಯಾನದಲ್ಲಿ ಭಾಗವಹಿಸುತ್ತಾರೆ ಎಂದು ವಿವರಿಸಿದರು.

ಇದನ್ನೂ ಓದಿ:

2047ನೇ ಇಸವಿಗೆ ಭಾರತವು ‘ವಿಕಸಿತ ಭಾರತ’ವಾಗಿ ಪರಿವರ್ತನೆ ಹೊಂದಬೇಕು; ಭಾರತವು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತನೆ ಕಾಣಬೇಕೆಂಬ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರ ಕನಸು ನನಸಾಗಲು ಗ್ರಾಮಗಳೂ ಅಭಿವೃದ್ಧಿ ಹೊಂದಬೇಕಿದೆ ಎಂದು ವಿಶ್ಲೇಷಿಸಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸವಲತ್ತುಗಳು ಸಿಗಬೇಕು. ಈ ನಿಟ್ಟಿನಲ್ಲಿ ‘ಗ್ರಾಮ ಚಲೋ’ ಅಭಿಯಾನವು ಉತ್ತಮ ಅಭಿಯಾನ ಆಗಲಿದೆ. ಈ ಅಭಿಯಾನದ ಮೂಲಕ ಪ್ರತಿ ಗ್ರಾಮ, ಪ್ರತಿ ಮನೆಗೂ ಬಿಜೆಪಿ ಕಾರ್ಯಕರ್ತರು ತಲುಪಲಿದ್ದು, ಕೇಂದ್ರ ಸರಕಾರವು ನರೇಂದ್ರ ಮೋದಿಜೀ ಅವರ ನೇತೃತ್ವದಲ್ಲಿ ಕೊಟ್ಟ ಜನಪರ ಯೋಜನೆಗಳನ್ನು ಮನೆಮನೆಗೆ ತಲುಪಿಸಲಾಗುತ್ತದೆ ಎಂದು ತಿಳಿಸಿದರು.

ಈ ಅಭಿಯಾನವು ಬಿಜೆಪಿಗೆ ದೊಡ್ಡ ಶಕ್ತಿಯಾಗಲಿದೆ. ‘ಮೋದಿ ಮತ್ತೊಮ್ಮೆ’ ಎಂಬ ವಿಚಾರವನ್ನು ಮುಂದಿಟ್ಟುಕೊಂಡು, ಮೋದಿಜೀ ಅವರು 3ನೇ ಬಾರಿಗೆ ಪ್ರಧಾನಿ ಆಗಬೇಕೆಂಬ ಆಶಯವನ್ನು ಹೊಂದಿ ಗೋಡೆ ಬರಹ ಬರೆಯಲಾಗುವುದು. ಕಳೆದ 10 ವರ್ಷಗಳಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ದೇಶದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕೆಂಬ ನಿಟ್ಟಿನಲ್ಲಿ ಈ ಅಭಿಯಾನ ನಡೆಯುತ್ತಿದೆ. ದೇಶದ ಪ್ರತಿಯೊಬ್ಬ ನಾಗರಿಕರೂ ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಆಶಿಸುತ್ತಿದ್ದಾರೆ ಎಂದು ನುಡಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮದಲ್ಲಿ ಕೊಂಚ ಬದಲಾವಣೆ ಆಗಿದೆ. ಇದೇ 10 ರಂದು ರಾತ್ರಿ ನೇರವಾಗಿ ದೆಹಲಿಯಿಂದ ಮೈಸೂರಿಗೆ ತಲುಪುತ್ತಾರೆ. 11ರ ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿಯ ದರ್ಶನ ಪಡೆದುಕೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ಸಂಜೆ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಸಂಜೆ ಬಿಜೆಪಿ ಕಾರ್ಯಕರ್ತರ ಸಭೆಯೂ ನಡೆಯಲಿದೆ ಎಂದು ವಿಜಯೇಂದ್ರ ತಿಳಿಸಿದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

10 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

10 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

11 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

11 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

11 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

11 hours ago